ಶಿಡ್ಲಘಟ್ಟ: ‘ದೇಶದ 140 ಕೋಟಿ ಮಂದಿಗೆ ಮತದಾನದ ಹಕ್ಕು ಸಿಕ್ಕಿದೆ ಎಂದರೆ ಅದಕ್ಕೆ ಅಂಬೇಡ್ಕರ್ ಅವರ ಸಂವಿಧಾನ ಕಾರಣ. ಅವರ ಜನ್ಮ ದಿನದಂದು ಸರ್ಕಾರವು ಸಂವಿಧಾನದ ಆಶಯವಾದ ಸಮಾನತೆ ಎಲ್ಲರಿಗೂ ಸಿಗಲೆಂಬ ಕಾರಣಕ್ಕೆ ಸಮಾನತೆಯ ದಿನವನ್ನಾಗಿ ಘೋಷಿಸಿದೆ’ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

ರಾಷ್ಟ್ರೀಯ ಮತ್ತು ನಾಡಹಬ್ಬಗಳ ಆಚರಣಾ ಸಮಿತಿಯಿಂದ ತಾಲ್ಲೂಕು ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬಾ ಜಗಜೀವನ್ ರಾಂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶೋಷಿತರು, ದಮನಿತರು ಸಮಾಜದ ಮುಖ್ಯವಾಹಿನಿಯಲ್ಲಿ ಸಾಗಲು, ಎಲ್ಲರಂತೆ ಸ್ವಾಭಿಮಾನದಿಂದ ಸಮಾನತೆಯ ಬದುಕು ನಡೆಸಲು ಅನುಕೂಲ ಆಗುವಂತೆ ಶ್ರೇಷ್ಠ ಸಂವಿಧಾನವನ್ನು ಕೊಟ್ಟ ಅಂಬೇಡ್ಕರ್ ಅವರನ್ನೇ ಚುನಾವಣೆಯಲ್ಲಿ ಸೋಲಿಸಿದ್ದು ವಿಪರ್ಯಾಸ. ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನು ಯಾರು ಸೋಲಿಸಿದರೋ ಅದೇ ಜನ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಪೂಜಿಸುತ್ತಾರೆ ಎಂದು ವ್ಯಂಗ್ಯವಾಡಿದರು.

ಮೋದಿ ಅವರು ಈ ತಿಂಗಳಲ್ಲಿ ವಿಶೇಷ ಅಧಿವೇಶನ ಕರೆದಿದ್ದು ಸಂಸತ್ನಲ್ಲಿ ಮಹಿಳಾ ಮೀಸಲು ವಿಧೇಯಕ ಮಂಡಿಸಲಿದ್ದಾರೆ. ಇದರಿಂದ ಮಹಿಳೆಯರಿಗೆ ಶೇ 33ರಷ್ಟು ಮೀಸಲು ಸಿಗಲಿದೆ. ಈ ಹಿಂದೆ ದೇವೇಗೌಡರು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲು ಜಾರಿ ಮಾಡಿ ಮಹಿಳೆಯರ ಸಬಲೀಕರಣಕ್ಕೆ ನಾಂದಿ ಹಾಡಿದ್ದರು ಎಂದರು.

ಡಾ.ಬಿ.ಅಂಬೇಡ್ಕರ್ ಮತ್ತು ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಂ ಭಾವಚಿತ್ರಕ್ಕೆ ನಮನ ಸಲ್ಲಿಸಲಾಯಿತು.

ಬಿ.ಆರ್.ಅಂಬೇಡ್ಕರ್ ಅವರ ಕುರಿತು ಲೆಪ್ಟಿನೆಂಟ್ ನರಸಿಂಹಮೂರ್ತಿ ಪ್ರಧಾನ ಭಾಷಣ ಮಾಡಿದರು. ಎ.ಆರ್.ಎಂ ಪಿಯು ಕಾಲೇಜು ಪ್ರಾಂಶುಪಾಲ ಮೂರ್ತಿ ಸಾಮ್ರಾಟ್ ಅವರು ಬಾಬು ಜಗಜೀವನ್ ರಾಂ ಜೀವನ ಚರಿತ್ರೆ ಕುರಿತು ಮಾತನಾಡಿದರು.

ಅಂತರರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಮಳ್ಳೂರು ಎಂ.ರಾಕೇಶ್, ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳು, ಉತ್ತಮ ಕಾರ್ಯನಿರ್ವಹಿಸುತ್ತಿರುವ 5 ಪೌರಕಾರ್ಮಿಕರು, ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಾರಿ ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.

ಕಾವೇರಿ ಹ್ಯಾಂಡ್ ಲೂಮ್ಸ್ ನಿಗಮದ ಅಧ್ಯಕ್ಷ ಬಿ.ಜೆ.ಗಣೇಶ್, ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ಹುಜಗೂರು ರಾಮಣ್ಣ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ಸಿ.ವಿ.ಲಕ್ಷ್ಮಣರಾಜು, ಎನ್.ಗಗನಸಿಂಧು, ಹೇಮಾವತಿ, ಜಿ.ಅಮೃತ, ನರೇಂದ್ರ ಕುಮಾರ್, ಡಾ.ವೆಂಕಟೇಶ್ಮೂರ್ತಿ, ಸಮಾಜ ಕಲ್ಯಾಣಾಧಿಕಾರಿ ಜಗದೀಶ್, ವೇಣುಗೋಪಾಲ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-16-778756269

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.