ಶಿಡ್ಲಘಟ್ಟ: ದೇಶದಲ್ಲಿ ತಲೆದೋರಿದ ಆಹಾರ ಸಮಸ್ಯೆ ಹೋಗಲಾಡಿಸಿ ಹಸಿರು ಕ್ರಾಂತಿ ಹರಿಕಾರ ಆಗಿರುವ ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬುಜಗಜೀವನರಾಂ ಅವರ ತತ್ವ ಆದರ್ಶವನ್ನು ಪ್ರತಿಯೊಬ್ಬರೂ ಪಾಲಿಸಬೇಕೆಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಹಮ್ಮಿಕೊಂಡಿದ್ದ ಹಸಿರು ಡಾ.ಬಾಬು ಜಗಜೀವನರಾಂ ಅವರ 119ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.

ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆ ಹೊಂದಿದ್ದ ಅವರು ಕಾರ್ಮಿಕರ ಏಳಿಗೆಯನ್ನು ಸದಾ ಬಯಸುತ್ತಿದ್ದರು. ದೇಶದ ಜನರು ಆಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ಹಸಿರು ಕ್ರಾಂತಿಗೆ ಕಾರಣರಾದರು ಎಂದು ಸ್ಮರಿಸಿದರು.

ತಹಶೀಲ್ದಾರ್ ಎನ್.ಗಗನಸಿಂಧೂ, ಬಾಬುಜಿ ಎಂದೇ ಕರೆಯಲ್ಪಡುವ ಜಗಜೀವನ ರಾಂ ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಅತ್ಯುತ್ತಮ ಸಂಸದೀಯ ಪಟುವಾಗಿದ್ದರು. ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ಮೊದಲ ಉಪ ಪ್ರಧಾನಿಯಾಗಿ ನಮ್ಮ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದರು.

ತಾ.ಪಂ ಇಓ ಹೇಮಾವತಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ನಗರಸಭೆ ಪೌರಾಯುಕ್ತೆ ಅಮೃತಾ, ಚಿಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಹುಜಗೂರು ರಾಮಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-16-1500149147

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.