ಶಿಡ್ಲಘಟ್ಟ: ತಾಲ್ಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸಪ್ಪನಬಾವಿ ಕಲ್ಯಾಣಿಯನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಸೋಮವಾರ ಸ್ವಚ್ಛಗೊಳಿಸಲಾಯಿತು.

ತಾಲ್ಲೂಕು ಪಂಚಾಯಿತಿ ಇಒ ಆರ್. ಹೇಮಾವತಿ ಮಾತನಾಡಿ, ‘ಹಿರಿಯರು ನಮಗೆ ವರದಾನವಾಗಿ ನೀಡಿದ ಕೆರೆ, ಕುಂಟೆ, ಕಲ್ಯಾಣಿಗಳನ್ನು ಉಳಿಸಿಕೊಳ್ಳುವ ಅಗತ್ಯವಿದೆ. ಗ್ರಾಮದ ಕಲ್ಯಾಣಿಗಳನ್ನು ಗ್ರಾಮಸ್ಥರ ಸಹಕಾರದೊಂದಿಗೆ ಸ್ವಚ್ಛಗೊಳಿಸಿ ಉತ್ತಮವಾಗಿ ನಿರ್ವಹಣೆ ಮಾಡಿದ್ದಲ್ಲಿ, ಮುಂದಿನ ಪೀಳಿಗೆಗೆ ನೀರಿಗಾಗಿ ಪರಿತಪಿಸುವ ಸ್ಥಿತಿ ಉದ್ಭವಿಸದು’ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ತಾಲ್ಲೂಕಿನ ಎಲ್ಲ ಕಲ್ಯಾಣಿಗಳ ನೈರ್ಮಲ್ಯಿಕರಣಕ್ಕೆ ಅಭಿಯಾನ ಕೈಗೊಳ್ಳಲಾಗುವುದು ಎಂದರು.

ತಾ.ಪಂ ಇಒ ಹೇಮಾವತಿ. ಆರ್, ತಾ.ಪಂ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ತಾಲ್ಲೂಕು ಯೋಜನಾಧಿಕಾರಿ ಅನಿಲ್ಕುಮಾರ್, ಇಇ ರಘುನಾಥಮೂರ್ತಿ, ಪಿಡಿಒ ವಜ್ರೇಶ್ಕುಮಾರ್, ನೋಡಲ್ ಅಧಿಕಾರಿಗಳು, ವಿವಿಧ ಗ್ರಾ.ಪಂ ಪಿಡಿಒಗಳು ಸೇರಿದಂತೆ ನರೇಗಾ ಸಿಬ್ಬಂದಿ, ತಾ.ಪಂ ಸಿಬ್ಬಂದಿ, ಜಲಗಾರರು, ಸ್ವಚ್ಛತಾಗಾರರು, ಗ್ರಾ.ಪಂ ಸಿಬ್ಬಂದಿ ಮತ್ತು ಗ್ರಾಮಸ್ಥರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-16-2052154031

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.