ಶಿಡ್ಲಘಟ್ಟ: ತಾಲ್ಲೂಕಿನ ರೈತರು ಸಲ್ಲಿಸಿದ 5,823 ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಪದಾಧಿಕಾರಿಗಲು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಮಾಡಿದರು.

ಈ ವೇಳೆ ಮಾತನಾಡಿದ ರೈತ ಸಂಘದ ಮುಖಂಡರು, ‘ಇನ್ನೇನು ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಆರಂಭವಾಗಲಿದೆ. ಬಿತ್ತನೆ ಕಾರ್ಯ ಶುರುವಾದ ನಂತರ ಜಮೀನುಗಳ ಅಳತೆ ಕಾರ್ಯ ಅಸಾಧ್ಯ. ರೈತರು ತಮ್ಮ ಜಮೀನುಗಳ ಹದ್ದುಬಸ್ತು, 11–ಇ, ತತ್ಕಾಲ್ ಪೋಡಿ ಅರ್ಜಿಗಾಗಿ ಕಚೇರಿಗೆ ಅಲೆದಾಡುವಂತಾಗಿದೆ. ಕೃಷಿ ಚಟುವಟಿಕೆಗಳ ಆರಂಭಕ್ಕೂ ಮುನ್ನವೇ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ಈ ವೇಳೆ ಭೂದಾಖಲೆಗಳ ಅಧಿಕಾರಿ ವಸಂತ್, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೆಳ್ಳೂಟಿ ಮುನಿಕೆಂಪಣ್ಣ, ಭಕ್ತರಹಳ್ಳಿ ಪ್ರತೀಶ್, ನಲ್ಲೇನಹಳ್ಳಿ ಸುಬ್ರಮಣಿ, ಎಚ್.ಎನ್. ಕದಿರೇಗೌಡ, ಹುಸೇನ್ ಸಾಬ್, ಮುನೇಗೌಡ, ನವೀನ್ ಚಾರ್ಯ, ಡಿ.ವಿ. ನಾರಾಯಣಸ್ವಾಮಿ ಹಾಗೂ ವಿವಿಧ ಗ್ರಾಮಗಳ ರೈತ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-16-1674974799

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.