ಶಿಡ್ಲಘಟ್ಟ: ನಂದಿನಿ ಹಾಲು, ಹಾಲಿನ ಉತ್ಪನ್ನಗಳನ್ನು ಜನರು ಹೆಚ್ಚಾಗಿ ಬಳಸಿ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಹಾಲು ಉತ್ಪಾದಕರು ಹಾಗೂ ಸಹಕಾರ ಸಂಘಗಳ ಉಳಿವಿಗೆ ಸಹಕರಿಸಬೇಕು ಎಂದು ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ತಿಳಿಸಿದರು.

ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ನಗರದ ಚಿಮುಲ್ ಶಿಬಿರ ಘಟಕದ ವತಿಯಿಂದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಸೋಮವಾರ ಉಚಿತವಾಗಿ ನಂದಿನಿ ಗುಡ್ಲೈಫ್ ಹಾಲನ್ನು ವಿತರಿಸಿ ಅವರು ಮಾತನಾಡಿದರು.

‘ಉತ್ತಮ ಗುಣಮಟ್ಟದ ನಂದಿನಿ ಹಾಲನ್ನು ಎಲ್ಲರೂ ಬಳಸುವಂತಾಗಬೇಕು. ನಂದಿನಿ ಹಾಲಿನ ಖರೀದಿಯಿಂದ ಬರುವಂತಹ ಹಣವು ನೇರವಾಗಿ ಉತ್ಪಾದಕರಿಗೆ ತಲುಪುತ್ತದೆ ಹಾಗೂ ಸಹಕಾರ ಸಂಘಗಳು ಸಹ ಬಲವರ್ಧನೆಯಾಗುತ್ತವೆ’ ಎಂದರು.

ಚಿಮುಲ್ ನಿರ್ದೇಶಕ ಹುಜಗೂರು ರಾಮಯ್ಯ ಮಾತನಾಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಡಾ.ಮನೋಹರ್, ಶಿಬಿರ ಘಟಕದ ವ್ಯವಸ್ಥಾಪಕ ಡಾ.ರವಿಕಿರಣ್, ಅಧಿಕಾರಿಗಳಾದ ಜಯಚಂದ್ರ, ಎಂ.ಆರ್.ಮಂಜುನಾಥ್, ನರಸಿಂಹಯ್ಯ, ಡಿ.ಮಂಜುನಾಥ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-16-364842829

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.