ಶಿಡ್ಲಘಟ್ಟ: ರಾಜಕಾರಣವು ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿರಬೇಕೆ ಹೊರತು ರಾಜಕಾರಣವು ಹಣ ಹೂಡಿಕೆ ಮತ್ತು ಹಣ ಮಾಡು ಎಂಬಂತಾಗಬಾರದು ಎಂದು ಸಂಯುಕ್ತ ಜನತಾದಳ (ಜೆಡಿಯು) ರಾಜ್ಯ ಘಟಕದ ಅಧ್ಯಕ್ಷ ಮಹಿಮ ಪಟೇಲ್ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜಕಾರಣ ಕೆಟ್ಟಿದೆ ಎನ್ನುವ ಮಾತುಗಳು ಕೇಳಿ ನಿರಾಶೆಯಾಗುವ ಬದಲಿಗೆ ಕೆಟ್ಟ ಪರಿಸ್ಥಿತಿ ಬದಲಿಸುವವರು ನಾವಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆಶಾವಾದಿಗಳಾಗಬೇಕು. ಈ ಹಿಂದೆ ರಾಜಕಾರಣಿಗಳಲ್ಲಿ ಸಾಮಾಜಿಕ ಕಳಕಳಿಯಿತ್ತು. ಆದರೆ, ಇದೀಗ ರಾಜಕೀಯ ಮಾಡುವ ಬಹುತೇಕರು ಹಣ ಹೂಡಿ, ಹಣ ಮಾಡುವವರೇ ಹೆಚ್ಚಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಆರೋಗ್ಯ, ಶಿಕ್ಷಣ, ಆಡಳಿತ, ಕೃಷಿ ಹಾಗೂ ಪರಿಸರದ ಕಡೆಯ ಆಶಯಗಳೊಂದಿಗೆ ರಾಜ್ಯದಾದ್ಯಂತ ಇರುವ ಪ್ರಜ್ಞಾವಂತರನ್ನು ಒಗ್ಗೂಡಿಸುವ ಮೂಲಕ ಜೆಡಿಯು ಪಕ್ಷ ಸಂಘಟನೆ ಮಾಡಲಾಗುತ್ತಿದೆ. ಹಾಗಾಗಿ ಮಠಾದೀಶರಿಂದ ಹಿಡಿದು ರಾಜಕಾರಣಿಗಳವರೆಗೆ ಎಲ್ಲ ಸಮಾನ ಮನಸ್ಕರು ಒಗ್ಗೂಡಿ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂದರು.

ಮುಂಬರುವ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡಾ.ಕೆ.ನಾಗರಾಜ್ ಅವರನ್ನು ಘೋಷಿಸಲಾಗಿದೆ. ಪ್ರಜ್ಞಾವಂತ ಪದವೀಧರರು ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಕೆ. ನಾಗರಾಜ್ ಮಾತನಾಡಿ, 2007ರ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಸೋಲನುಭವಿಸಿದ್ದೆ ಎಂದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗಂಗೂರ್, ಕೆ.ರಂಗನಾಥ್, ಮಹಿಳಾ ಘಟಕದ ರಾಜ್ಯ ಘಟಕದ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಕೆ.ವಿ.ಶಿವರಾಂ, ಉಪಾಧ್ಯಕ್ಷೆ ಶಾಂತಕುಮಾರಿ, ಡಿ.ಜೆ.ಪ್ರಭು, ನಾರಾಯಣಸ್ವಾಮಿ ಗೌಡ, ಮನು, ಯಾರಬ್ ಬಾಬು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-16-1614269777

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.