ಶಿಡ್ಲಘಟ್ಟ: ಶ್ರೀರಾಮನ ಆದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಜೊತೆಗೆ, ಯುವ ಪೀಳಿಗೆಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಮೌಲ್ಯ ಬೆಳೆಸುವ ಉದ್ದೇಶದಿಂದ ಭಾನುವಾರ ಶ್ರೀರಾಮ ಶೋಭಾಯಾತ್ರೆಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಶ್ರೀರಾಮ ಶೋಭಾಯಾತ್ರೆಯ ಆಚರಣೆ ಸಮಿತಿ ಅಧ್ಯಕ್ಷ ಬಿ.ವೆಂಕಟೇಶ್ ಹೇಳಿದರು.

ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಇರುವ ಸಲ್ಲಾಪರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಗರದ ಹೊರವಲಯದ ದಿಬ್ಬೂರಹಳ್ಳಿ ರಸ್ತೆಯಲ್ಲಿ ಹನುಮಂತಪುರ ಗೇಟ್ ಬಳಿ ಇರುವ ಆಂಜನೇಯಸ್ವಾಮಿ ದೇವಾಲಯದ ಆವರಣದಿಂದ ಭಾನುವಾರ ಬೆಳಗ್ಗೆ 11 ಗಂಟೆಗೆ ಶೋಭಾಯಾತ್ರೆ ಆರಂಭವಾಗಲಿದೆ ಎಂದು ತಿಳಿಸಿದರು.

ಶ್ರೀರಾಮ ಶೋಭಾಯಾತ್ರೆಯ ದಿನದಂದು ಎಲ್ಲ ಹಿಂದೂಗಳ ಮನೆಯ ಮುಂಭಾಗ ರಂಗೋಲಿ ಹಾಗೂ ಹೂವಿನಿಂದ ಅಲಂಕೃತವಾಗಿರಲಿ. ಮನೆಗೆ ಹಸಿರು ತೋರಣ ಕಟ್ಟಿ, ಭಗವಾ ಧ್ವಜ ಕಟ್ಟಿ, ಹಬ್ಬದ ವಾತಾವರಣ ಸೃಷ್ಟಿಯಾಗಲಿ ಎಂದು ಮನವಿ ಮಾಡಿದರು.

ಶೋಭಾಯಾತ್ರೆ ಸಮಿತಿ ಉಪಾಧ್ಯಕ್ಷ ಪ್ರಕಾಶ್, ಸಮಿತಿ ಸದಸ್ಯರಾದ ಗುಡಿಹಳ್ಳಿ ಮಂಜುನಾಥ್, ಅನಿಲ್ಕುಮಾರ್, ಭರತ್, ರವಿಚಂದ್ರ, ನಾಗೇಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-16-1208939321

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.