ಶಿಡ್ಲಘಟ್ಟ: ನಗರದ ಚಿಂತಾಮಣಿ ರಸ್ತೆಯಲ್ಲಿರುವ ವೀರಾಂಜನೇಯ ದೇವಾಲಯದ ಮುಂಭಾಗದಲ್ಲಿ ಶುಕ್ರವಾರ ರಾಮನವಮಿ ಪ್ರಯುಕ್ತ 96ನೇ ವರ್ಷದ ಉಟ್ಲು ಪರಿಷೆ ನಡೆಯಿತು. ಕ್ಷೀರ ಉಟ್ಲು ಮತ್ತು ಮನರಂಜನಾ ಉಟ್ಲು ನಡೆಯಿತು. ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗೇಟ್ ಬಳಿ ಇರುವ ಬಯಲಾಂಜನೇಯ ದೇವಾಲಯದಲ್ಲಿ ಮತ್ತು ಭಕ್ತರಹಳ್ಳಿಯಲ್ಲಿ ಸಹ ಉಟ್ಲು ಪರಿಷೆ ನಡೆಯಿತು.

ಚಿಂತಾಮಣಿ ರಸ್ತೆಯಲ್ಲಿರುವ ವೀರಾಂಜನೇಯ ದೇವಾಲಯದ ಮುಂಭಾಗದಲ್ಲಿ ವೀರಾಂಜನೇಯಸ್ವಾಮಿ ಬಲಿಜ ಸೇವಾ ಟ್ರಸ್ಟ್ ವತಿಯಿಂದ 96ನೇ ವರ್ಷದ ಉಟ್ಲು ಪರಿಷೆ ವಿಶೇಷವಾಗಿ ಜನಾಕರ್ಷಣೆಗೆ ಪಾತ್ರವಾಗಿತ್ತು. ಹಾಲನ್ನು ಮಡಿಕೆಯಲ್ಲಿ ಕಟ್ಟಿ ಪೂಜಿಸಿ ಹೊಡೆಯುತ್ತಾರೆ.

ಎತ್ತರದ ಕಂಬದ ಮೇಲೆ ಕಬ್ಬಿಣದಲ್ಲಿ ಮಾಡಿರುವ ತಿರುಗುಮಣೆ ಇರುತ್ತದೆ. ಅದಕ್ಕೆ ನಾಲ್ಕು ಹಗ್ಗ ಕಟ್ಟಿರುತ್ತಾರೆ. ಹಗ್ಗದ ತುದಿಯಲ್ಲಿ ತೆಂಗಿನಕಾಯಿ ಕಟ್ಟಿರುತ್ತಾರೆ. ತಿರುಗುಮಣೆಯಲ್ಲಿ ಇಬ್ಬರು ಕುಳಿತು ತಿರುಗಿಸುತ್ತಿದ್ದಂತೆಯೇ ತೆಂಗಿನಕಾಯಿ ಕಟ್ಟಿರುವ ಹಗ್ಗವೂ ಸುತ್ತತೊಡಗುತ್ತವೆ. ಉದ್ದುದ್ದ ಕೋಲು ಹಿಡಿದು ಕೆಲವರು ತೆಂಗಿನಕಾಯಿ ಹೊಡೆಯಲು ನಿಂತಿರುತ್ತಾರೆ. ಅವರು ತೆಂಗಿನಕಾಯಿಗೆ ಹೊಡೆಯದಂತೆ ಅವರೆಡೆಗೆ ಸುತ್ತಲಿಂದ ನೀರನ್ನು ಎರಚುತ್ತಿರುತ್ತಾರೆ. ಈ ಆಟ ನೋಡುವ ಜನ ಹೊಡೆಯುವವರನ್ನು ಕೂಗುತ್ತಾ ಹುರಿದುಂಬಿಸುತ್ತಾರೆ. ತೆಂಗಿನ ಕಾಯಿ ಹೊಡೆದವರಿಗೆ ಹಾರಹಾಕಿ ದೇವಾಲಯದಲ್ಲಿ ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-16-2138238861

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.