ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಂತಾಮಣಿ | ಶ್ರಾವಣ ಮಾಸದ 3ನೇ ಶನಿವಾರ: ದೇಗುಲಕ್ಕೆ ಭಕ್ತರ ದಂಡು

Published : 24 ಆಗಸ್ಟ್ 2024, 15:35 IST
Last Updated : 24 ಆಗಸ್ಟ್ 2024, 15:35 IST
ಫಾಲೋ ಮಾಡಿ
Comments

ಚಿಂತಾಮಣಿ: ಶ್ರಾವಣಮಾಸದ ಮೂರನೇ ಶನಿವಾರ ನಗರ ಹಾಗೂ ತಾಲ್ಲೂಕಿನ ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಪೂಜೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಂಭ್ರಮದಿಂದ ನೆರವೇರಿದವು.

ಬಹುತೇಕ ಎಲ್ಲ ದೇವಾಲಯಗಳಲ್ಲೂ ಜನಜಂಗುಳಿ ಕಂಡುಬಂತು. ಕೈವಾರದಲ್ಲಿ ವಿಶೇಷ ಪೂಜಾ ಕೈಂಕರ್ಯ ಏರ್ಪಡಿಸಲಾಗಿತ್ತು. ಅಮರ ನಾರೇಯಣ ದೇವಾಲಯ, ಭೀಮಲಿಂಗೇಶ್ವರ ದೇವಸ್ಥಾನಗಳಲ್ಲಿ ಅಭಿಷೇಕ, ಅಲಂಕಾರ, ಪೂಜೆ, ಮಹಾಮಂಗಳಾರತಿ ನಡೆದವು.

ಯೋಗಿನಾರೇಯಣ ಮಠದಲ್ಲಿ ವಿಶೇಷ ಅಭಿಷೇಕ, ಪ್ರಾಕಾರೋತ್ಸವ, ಮಹಾ ಮಂಗಳಾರತಿ ಸೇವೆ ನಡೆಯಿತು.

ಆಲಂಬಗಿರಿ ಲಕ್ಷ್ಮಿವೆಂಕಟರಮಣ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗಿನಿಂದಲೇ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಹರಿಕೆ-ಮುಡಿಪು ಸಮರ್ಪಿಸಿದರು.

ದೇವಾಲಯದಲ್ಲಿ ಬೆಳಗ್ಗೆ ಘಂಟಾನಾದ, ಸುಪ್ರಭಾತ, ಗೋಪೂಜೆ ನೇರವೇರಿಸಲಾಯಿತು. ದೇವಾಲಯವನ್ನು ವಿಶೇಷವಾಗಿ ಹೂಗಳಿಂದ ಅಲಂಕರಿಸಲಾಗಿತ್ತು.

ತಾಲ್ಲೂಕಿನ ಚಿಲಕಲನೇರ್ಪು ಹೋಬಳಿಯ ಏನಿಗದಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಕುಂಠಪುರದ ಹರಿಕ್ಷೇತ್ರದಲ್ಲಿ ವೆಂಕಟರಮಣಸ್ವಾಮಿಗೆ ಮಾಡಿದ್ದ ವಿಶೇಷ ಅಲಂಕಾರ ಭಕ್ತರ ಗಮನಸೆಳೆಯುತ್ತಿತ್ತು. ನಗರದ ವರದಾದ್ರಿ ಬೆಟ್ಟದಲ್ಲಿ ವರದಾಂಜನೇಯ ದೇವಾಲಯದಲ್ಲಿ ವಿಶೇಷ ಅಭಿಷೇಕ, ಅಲಂಕಾರ, ಪೂಜೆ ಅದ್ದೂರಿಯಾಗಿ ನಡೆದವು. ಸ್ವಾಮಿಗೆ ಕೊಬ್ಬರಿ ಅಲಂಕಾರ ಮಾಡಲಾಗಿತ್ತು.

ಮಹಾಕೈಲಾಸಗಿರಿ, ಬೂರಗಮಾಕಲಹಳ್ಳಿಯ ವೀರಾಂಜನೇಯ ದೇವಾಲಯ, ಮುರುಗಮಲ್ಲದ ಮುಕ್ತೀಶ್ವರ, ಕುರುಟಹಳ್ಳಿಯ ವೀರಾಂಜನೇಯ, ಕನಂಪಲ್ಲಿಯ ಪಂಚಮುಖಿ ಆಂಜನೇಯ, ನಾಗನಾಥೇಶ್ವರ, ಹರಿಹರೇಶ್ವರ, ಬೆಂಗಳೂರು ರಸ್ತೆಯ ಶನಿಮಹಾತ್ಮ ದೇವಾಲಯಗಳಲ್ಲೂ ಶ್ರಾವಣ ಮಾಸದ ವಿಶೇಷ ಅಲಂಕಾರ, ಪೂಜೆ ನೆರವೇರಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT