ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

 ಚಿಕ್ಕಬಳ್ಳಾಪುರ | ಸಿದ್ದರಾಮಯ್ಯ ಪ್ರಮಾಣ ಪತ್ರ ಬೇಕಿಲ್ಲ: ಸಚಿವ ಸುಧಾಕರ್

Last Updated 28 ಜನವರಿ 2023, 6:22 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ನಾನು ಸಚಿವನಾಗಬೇಕೆ ಬೇಡವೇ ಎಂಬುದನ್ನು ನಿರ್ಧರಿಸುವುದು ರಾಜ್ಯದ ಜನರು. ನಮ್ಮ ಪಕ್ಷದ ಸರ್ಕಾರವೇ ಹೊರತು ಸಿದ್ದರಾಮಯ್ಯ ಅಲ್ಲ. ನನ್ನ ಅರ್ಹತೆ ಬಗ್ಗೆ ಸಿದ್ದರಾಮಯ್ಯ ಅವರ ಪ್ರಮಾಣ ಪತ್ರ ಅಗತ್ಯವಿಲ್ಲ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ತಾಲ್ಲೂಕಿನ ಚಿತ್ರಾವತಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಹೇಳಿದ ಕಾರಣಕ್ಕೆ ನನ್ನ ಸಚಿವನನ್ನಾಗಿ ಮಾಡಿಲ್ಲ. ನಮ್ಮ ಪಕ್ಷದ ಸರ್ಕಾರ, ಮುಖ್ಯಮಂತ್ರಿ ಮತ್ತು ಜನರು ನನ್ನನ್ನು ಸಚಿವನನ್ನಾಗಿ ಮಾಡಿದ್ದಾರೆ. ಜನತಾದಳದಲ್ಲಿ ಇದ್ದಾಗ ಯಾಕೆ ಇವರನ್ನು ಮುಖ್ಯಮಂತ್ರಿ ಮಾಡಲಿಲ್ಲ’ ಎಂದು ಪ್ರಶ್ನಿಸಿದರು.

ಬಾಯಿ ಚಪಲಕ್ಕೆ ಮಾತನಾಡುವುದು ಸರಿಯಲ್ಲ. ನನ್ನ ಖಾತೆ ನಿರ್ವಹಣೆ ಬಗ್ಗೆ ಜನರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಸಚಿವ ಸ್ಥಾನಕ್ಕೆ ಲಾಯಕ್ಕಾ? ಅಲ್ಲವಾ ಎಂಬುದನ್ನು ಜನರು ನಿರ್ಧರಿಸುತ್ತಾರೆ ಎಂದರು.

ವಿದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡಿದವರು ರಾಜ್ಯದಲ್ಲಿ ಸೇವೆ ಒದಗಿಸಲು ಭಾರತೀಯ ವೈದ್ಯಕೀಯ ಮಂಡಳಿ ಮಾರ್ಗಸೂಚಿಯ ಪ್ರಕಾರ ನೆಕ್ಸ್ಟ್ ಪರೀಕ್ಷೆ ತೇರ್ಗಡೆ ಆಗಬೇಕು. ‌ಇದು ರಾಜ್ಯಕ್ಕೆ ಸಂಬಂಧಿಸಿದ ವಿಷಯವಲ್ಲ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ವಿಚಾರ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT