ಶಿಡ್ಲಘಟ್ಟ: ಇಲ್ಲಿನ ವಿಧಾನಸಭಾ ಕ್ಷೇತ್ರದ ಜನರಿಗೆ ಏಪ್ರಿಲ್ 14 ಮತ್ತು 15 ರಂದು ತೀರ್ಥಯಾತ್ರೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸೀಕಲ್ ರಾಮಚಂದ್ರ ಗೌಡ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ತೀರ್ಥಯಾತ್ರೆ ಭಾರತದ ಸಾಂಸ್ಕೃತಿಕ ಪರಂಪರೆ, ಅಧ್ಯಾತ್ಮಿಕ ಶಕ್ತಿಯನ್ನು ಸಾಕ್ಷಾತ್ಕರಿಸುತ್ತದೆ. ಕ್ಷೇತ್ರದ ಜನರಿಗೆ ಯಾತ್ರಾ ಸ್ಥಳಗಳ ದರ್ಶನ ಮಾಡಲು ಪ್ರತಿ ಪಂಚಾಯತಿಗೆ ಎರಡು ಬಸ್ ಮತ್ತು ತೀರ್ಥ ಸ್ಥಳಗಳಲ್ಲಿ ಉಳಿದುಕೊಳ್ಳಲು ವಸತಿ ಸೌಲಭ್ಯ ಮತ್ತು ಊಟದ ವ್ಯವಸ್ಥೆ ಒದಗಿಸಿದ್ದೇವೆ ಎಂದು ಹೇಳಿದರು.

ಏಪ್ರಿಲ್ 14 ರಂದು ಮಧ್ಯಾಹ್ನ 2 ಗಂಟೆಗೆ ಶಿಡ್ಲಘಟ್ಟ ತಾಲ್ಲೂಕಿನಿಂದ ಹೊರಟು ಬಿದನಗೆರೆಯ ಪಂಚಮುಖ ಆಂಜನೇಯ ದೇವಸ್ಥಾನದಲ್ಲಿ ದೇವರ ದರ್ಶನ, ಸತ್ಯ ಶನೇಶ್ವರ ದೇವಸ್ಥಾನದ ದರ್ಶನ ಮಾಡಿ ಯಡಿಯೂರಿನ ಸಿದ್ದಲಿಂಗೇಶ್ವರ ದರ್ಶನ ಮಾಡಿ ಅಲ್ಲಿಯೇ ರಾತ್ರಿ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಬೆಳಗ್ಗೆ ಸಿದ್ದಲಿಂಗೇಶ್ವರ ದರ್ಶನ ಪಡೆದು ಆನಂತರ ಏಪ್ರಿಲ್ 15ರಂದು ಆದಿಚುಂಚನಗಿರಿಯಲ್ಲಿ ನಡೆಯಲಿರುವ ಗುರು ಭೈರವೈಕ್ಯ ಮಂದಿರದ ಲೋಕಾರ್ಪಣ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದರು.

ಮಧ್ಯಾಹ್ನ 3 ಗಂಟೆಗೆ ಆದಿಚುಂಚನಗಿರಿಯ ಕಾಲಭೈರವೈಶ್ವರ ದರ್ಶನ ಪಡೆದು ವಾಪಸ್ ಆಗಮಿಸುತ್ತೇವೆ ಎಂದರು.

ಶಿಡ್ಲಘಟ್ಟ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ ಗೌಡ, ವೆಂಕಟೇಶ್ವರ ಚಿತ್ರಮಂದಿರದ ಮಾಲೀಕ ಪ್ರಕಾಶ್, ಸಂಜೀವಪ್ಪ, ಪುರುಷೋತ್ತಮ್, ನರೇಶ್, ರಾಮಕೃಷ್ಣ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-16-1690915822

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.