ಶಿಡ್ಲಘಟ್ಟ: ಡಾ.ಬಿ.ಆರ್.ಅಂಬೇಡ್ಕರ್, ಆದಿ ಜಾಂಬವ ಹಾಗೂ ಭೋವಿ ಅಭಿವೃದ್ಧಿ ನಿಗಮಗಳು ಪರಿಶಿಷ್ಟ ಜಾತಿ, ಪಂಗಡದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಸಹಾಯಧನ ಮತ್ತು ಸಾಲದೊಂದಿಗೆ ಬೋರ್ವೆಲ್, ಪಂಪ್ಸೆಟ್ ಸೌಲಭ್ಯ ಒದಗಿಸುತ್ತವೆ. ಸವಲತ್ತು ಸದುಪಯೋಗ ಮಾಡಿಕೊಂಡು ರೈತರು ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.

ನಗರದಲ್ಲಿ ಸೋಮವಾರ ಡಾ.ಬಿ.ಆರ್.ಅಂಬೇಡ್ಕರ್, ಆದಿ ಜಾಂಬವ ಹಾಗೂ ಭೋವಿ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯ 24 ಅರ್ಹ ಫಲಾನುಭವಿಗಳಿಗೆ ಪಂಪ್ ಮೋಟಾರ್ ವಿತರಿಸಿ ಮಾತನಾಡಿದರು.

ಸರ್ಕಾರದಿಂದ ಸಿಗುವ ವಿವಿಧ ರೀತಿಯ ಸೌಲಭ್ಯ ಹಾಗೂ ಅನುದಾನ ನೇರವಾಗಿ ಅರ್ಹ ಫಲಾನುಭವಿಗೆ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ರಾಜ್ಯದ ಜನತೆ ಕಟ್ಟುವ ತೆರಿಗೆ ಹಣದಿಂದ ಸರ್ಕಾರ ರೂಪಿಸುವ ಯಾವುದೇ ಯೋಜನೆಯಾಗಲಿ ಅದು ಯಶಸ್ವಿಯಾಗಬೇಕಾದರೆ ಅರ್ಹ ಫಲಾನುಭವಿಗೆ ಆ ಯೋಜನೆ ತಲುಪಬೇಕು. ತಲುಪಿಸುವ ಕೆಲಸ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಮೇಲಿರುತ್ತದೆ ಎಂದರು.

ದುರ್ಬಲರು ಆರ್ಥಿಕವಾಗಿ ಮುಂದುವರೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಸವಲತ್ತುಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದರು.

ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ತಾ.ಪಂ ಮಾಜಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.