ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲ್ಮೀಕಿ ಜಯಂತಿ ಸರಳವಾಗಿ ಆಚರಿಸಿ

Last Updated 22 ಅಕ್ಟೋಬರ್ 2020, 14:26 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: 'ಪ್ರಸ್ತುತ ದಿನಗಳಲ್ಲಿ ಕೋವಿಡ್‌ ದಿನೇ ದಿನೇ ವ್ಯಾಪಕವಾಗಿ ಹರಡುತ್ತಿರುವುದರಿಂದ ಈ ಬಾರಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 31 ರಂದು ಸರಳವಾಗಿ ಆಚರಣೆ ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಕೋವಿಡ್‌ ಉಲ್ಭಣಿಸಿದ ಬಳಿಕ ಜಿಲ್ಲೆಯಲ್ಲಿ ಎಲ್ಲಾ ಮಹನೀಯರ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುತ್ತಿದೆ. ಅದೇ ಮಾದರಿಯಲ್ಲೇ ಸರಳವಾಗಿ ಮಹರ್ಷಿ ವಾಲ್ಮಿಕಿ ಜಯಂತಿಯನ್ನು ಕೂಡ ಆಚರಿಸಲಾಗುವುದು. ಇದಕ್ಕೆ ಸಮುದಾಯದ ಮುಖಂಡರ ಹಾಗೂ ಎಲ್ಲಾ ನಾಗರಿಕರ ಸಹಕಾರ ಅತ್ಯಗತ್ಯ’ ಎಂದು ಹೇಳಿದರು.

‘ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಸಾಂಕೇತಿಕವಾಗಿ ಆಚರಣೆ ಮಾಡಲಾಗುವುದು. ಕೋವಿಡ್‌ ತಡೆಗಟ್ಟಲು ನಿಟ್ಟಿನಲ್ಲಿ ಗುಂಪು ಸೇರುವುದು, ವಿಜೃಂಭಣೆಯಿಂದ ಆಚರಣೆ, ಮೆರವಣಿಗೆಗೆ ಅವಕಾಶ ಇರುವುದಿಲ್ಲ. ವಾಲ್ಮಿಕಿ ಜಯಂತಿ ಸರಳ ಆಚರಣೆಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ಜಿಲ್ಲೆಯಲ್ಲಿ ವಾಲ್ಮಿಕಿ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಮತ್ತು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡದ ರೈತರಿಗೆ ಬಾಕಿ ಇರುವ ಕೊಳವೆಬಾವಿಗಳನ್ನು ಕೊರೆಯಿಸಿ ತ್ವರಿತ ಗತಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.

ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT