ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಮಂಗಳವಾರ ಸಮರ್ಪಣಾ ಸಂಕಲ್ಪ ಸಮಾವೇಶ ನಡೆಯಲಿದೆ. ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು ಜಿಲ್ಲೆಯಿಂದ ಹೆಚ್ಚ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೆಪಿಸಿಸಿ ವಕ್ತಾರ ಇರ್ಷಾದ್ ಶೇಖ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದಿನ ಬಿಜೆಪಿ ಸರ್ಕಾರ ಜನವಿರೋಧಿಯಾಗಿತ್ತು. ಅತಿಯಾದ ಭ್ರಷ್ಟಾಚಾರದಿಂದ ರಾಜ್ಯದ ಜನರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿತ್ತು ಎಂದರು.

ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ ಎರಡು ವರ್ಷಗಳಿಂದ ರಾಜ್ಯದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ಒದಗಿಸಲು ಶ್ರಮಿಸುತ್ತಿದೆ. ಸಾಮಾಜಿಕ ನ್ಯಾಯದಡಿ ಜನರ ಬದುಕು ಕಟ್ಟಿಕೊಳ್ಳಲು ಹಲವುರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ಸಮ ಸಮಾಜ ನಿರ್ಮಾಣಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೋವಿಡ್ ನಂತರ ಜನರು ಆರ್ಥಿಕವಾಗಿ ಕುಗ್ಗಿದ್ದರು. ಜೀವನ ನಡೆಸಲು ಕಷ್ಟದ ಸ್ಥಿತಿ ಇತ್ತು. ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡಿ ಜನಸಾಮಾನ್ಯರ ಬದುಕಿಗೆ ನೆರವಾಗಿದೆ ಎಂದರು.

ಹೊಸಪೇಟೆ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹಟ್ಟಿ ಮತ್ತು ತಾಂಡಾಗಳಲ್ಲಿ ವಾಸಿಸುವ ಒಂದು ಲಕ್ಷ ಸೂರಿಲ್ಲದ ಕುಟುಂಬದವರಿಗೆ ಹಕ್ಕು ಪತ್ರ ವಿತರಣೆ ಮಾಡಲಿದ್ದಾರೆ ಎಂದರು.

ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿದೆ. ಆದರೆ ರಾಜ್ಯಕ್ಕೆ ಕೇಂದ್ರದಿಂದ ಬರುವ ಪಾಲು ನಿರೀಕ್ಷಿತ ಪ್ರಮಾಣದಲ್ಲಿ ಇಲ್ಲ. ಆದರೂ ರಾಜ್ಯ ಸರ್ಕಾರ ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಹಿಂದಿಲ್ಲ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜಯರಾಮ್, ಮಂಡಿಕಲ್ ಮಂಚೇನಹಳ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್, ಪ್ರಧಾನ ಕಾರ್ಯದರ್ಶಿ ವಿ.ಸುರೇಶ್, ಎಂ.ಜಿ ಸುಹೇಲ್ ಅಹಮದ್, ಅಬ್ದುಲ್ ಜಬ್ಬಾರ್, ಸುಹೇಲ್ ಅಹಮದ್, ಸೈದ್ ಅಮಾನುಲ್ಲಾ, ಸೈದ್ ಇಬ್ರಾಹಿಂ, ನಗರಸಭೆ ನಾಮ ನಿರ್ದೇಶನ ಸದಸ್ಯ ಡೇರಿ ಗೋಪಿ, ನಾರಾಯಣಮ್ಮ, ವೆಂಕಟಲಕ್ಷ್ಮಮ್ಮ, ಬಾಬಾ ಜಾನ್ ಇತರರು ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.