ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಡಿಬಂಡೆ: ಪಾನಮತ್ತನಾಗಿದ್ದ ಮಗನಿಂದ ತಾಯಿ ಮೇಲೆ ಅತ್ಯಾಚಾರ

Published : 5 ಆಗಸ್ಟ್ 2024, 16:36 IST
Last Updated : 5 ಆಗಸ್ಟ್ 2024, 16:36 IST
ಫಾಲೋ ಮಾಡಿ
Comments

ಗುಡಿಬಂಡೆ (ಚಿಕ್ಕಬಳ್ಳಾಪುರ): ತಾಲ್ಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನ್ನಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಮದ್ಯದ ಅಮಲಿನಲ್ಲಿ ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಅಲ್ಲದೆ ತಂದೆ ಮತ್ತು ತಾಯಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಅವರನ್ನು ಮನೆ ಹಿಂಭಾಗದ ತಿಪ್ಪೆಗುಂಡಿಗೆ ಎಸೆದು ಪರಾರಿ ಆಗಿದ್ದಾನೆ. ನೆರೆಹೊರೆಯವರು ಈ ವಿಚಾರವನ್ನು ಪೊಲೀಸರಿಗೆ ತಲುಪಿಸಿದ್ದಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಆರೋಪಿಗೆ ವಿವಾಹವಾಗಿದ್ದು ಆತನ ಪತ್ನಿ ದೂರವಿದ್ದಾಳೆ ಎನ್ನಲಾಗುತ್ತಿದೆ. ಈತ ತಂದೆ ತಾಯಿಯ ಜೊತೆ ವಾಸಿಸುತ್ತಿದ್ದ. ಸಂತ್ರಸ್ತೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಸೋಮವಾರ ರಾತ್ರಿ ಗುಡಿಬಂಡೆ ಠಾಣೆಗೆ ಡಿವೈಎಸ್‌ಪಿ ಶಿವಕುಮಾರ್ ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದರು. ಆಸ್ಪತ್ರೆಗೂ ಭೇಟಿ ನೀಡಿ ಆರೋಪಿಯ ತಂದೆಯಿಂದ ಮಾಹಿತಿ ಕಲೆ ಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT