ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಒತ್ತಡ ನಿವಾರಣೆಗೆ ಕ್ರೀಡೆ ಅವಶ್ಯ

Last Updated 14 ಮಾರ್ಚ್ 2021, 4:09 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನೌಕರರು ಒತ್ತಡದಿಂದ ಕಾರ್ಯನಿರ್ವಹಿಸುವರು. ಅವರ ಮಾನಸಿಕ ಒತ್ತಡ ನಿವಾರಣೆಗೆ ಇಂತಹ ಕ್ರೀಡಾಕೂಟಗಳು ಅವಶ್ಯ ಎಂದು ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರಾಟ ನಿಗಮದ ಅಧ್ಯಕ್ಷ ಕೆ.ವಿ. ನಾಗರಾಜ್ ತಿಳಿಸಿದರು.

ನಗರದ ಸರ್‌ ಎಂ.ವಿ. ಕ್ರೀಡಾಂಗಣ ದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕ್ರೀಡಾ ಸಮಿತಿಯು ದಿ.ಕೆ. ಕಿಶೋರ್ ಸ್ಮರಣಾರ್ಥ ಹಮ್ಮಿ ಕೊಂಡಿ ರುವ ಚಿಕ್ಕಬಳ್ಳಾಪುರ ವಿಭಾಗೀಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾ ವಳಿಗೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಸ್ಪರ್ಧೆಗಳು ನಡೆಯಬೇಕು. ಕ್ರೀಡಾಕೂಟಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುತ್ತವೆ ಎಂದು ಹೇಳಿದರು.

ಮುಖಂಡ ಕೆ.ವಿ. ನವೀನ್ ಕಿರಣ್ ಮಾತನಾಡಿ, ‘ನಿತ್ಯವೂ ನಮಗೆ ವಿದ್ಯುತ್ ನೀಡುವ ಮೂಲಕ ಇಲಾಖೆ ನೌಕರರು ಕತ್ತಲೆಯನ್ನು ದೂರು ಮಾಡುವರು. ಈ ನೌಕರರ ಕಾರ್ಯ ಮೆಚ್ಚುವಂತಹದ್ದು’ ಎಂದು ಪ್ರಶಂಸಿಸಿದರು.

ಜಿಲ್ಲೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯಾಪ್ತಿಯ 18 ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದವು.

ಕೆಪಿಟಿಸಿಎಲ್ ನೌಕರರ ಸಂಘದ ಮುಖಂಡ ಕೆ. ಶ್ರೀನಿವಾಸ್, ನಿವೃತ್ತ ನೌಕರರ ಸಂಘದ ಕೆ.ಎಂ. ನಾಗರಾಜ್, ಎಲ್. ನಾಗರಾಜ್, ಅಶ್ವತ್ಥನಾರಾಯಣ್, ಅಂತೋಣಿಸಾಮಿ, ಆನಂದರೆಡ್ಡಿ, ಮರಳುಕುಂಟೆ ಕೃಷ್ಣಮೂರ್ತಿ, ಶಿವಶರಣ, ನಾರಾಯಣಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT