ಬುಧವಾರ, ಸೆಪ್ಟೆಂಬರ್ 22, 2021
29 °C

ಚಿಕ್ಕಬಳ್ಳಾಪುರ: ಬೆಳಿಗ್ಗೆ 8.30ರಿಂದಲೇ ಪರೀಕ್ಷಾ ಕೇಂದ್ರಗಳತ್ತ ವಿದ್ಯಾರ್ಥಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರದ ಪರೀಕ್ಷೆ ಕೇಂದ್ರವೊಂದರಲ್ಲಿ ವಿದ್ಯಾರ್ಥಿಗಳು

ಚಿಕ್ಕಬಳ್ಳಾಪುರ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಬೆಳಿಗ್ಗೆ 8.30ರಿಂದಲೇ ಪರೀಕ್ಷಾ ಕೇಂದ್ರಗಳಿಗೆ ಬರುತ್ತಿದ್ದಾರೆ.

ಜಿಲ್ಲೆಯಲ್ಲಿ 17,102 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 99 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 1,516 ಕೊಠಡಿಗಳನ್ನು ನಿಗದಿಗೊಳಿಸಲಾಗಿದೆ. 2,456 ಸಿಬ್ಬಂದಿಯನ್ನು ಪರೀಕ್ಷಾ ಕೆಲಸಕ್ಕೆ ನಿಯೋಜಿಸಲಾಗಿದೆ.

ಕೇಂದ್ರಗಳ ಹೊರ ಭಾಗದ ಮೂರು ಕಡೆ ನಾಮಫಲಕ ಅಳವಡಿಸಿ ನೋಂದಣಿ ಸಂಖ್ಯೆ ನಮೂದಿಸಲಾಗಿದೆ. ವಿದ್ಯಾರ್ಥಿಗಳು ಗುಂಪುಗೂಡದಂತೆ ಸಿಬ್ಬಂದಿ ತಿಳಿವಳಿಕೆ ಹೇಳುತ್ತಿದ್ದಾರೆ.

ನಗರದ ಸರ್ಕಾರಿ ಜೂನಿಯರ್ ಕಾಲೇಜು ಪರೀಕ್ಷಾ ಕೇಂದ್ರ ಸೇರಿದಂತೆ ವಿವಿಧ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು