ಬುಧವಾರ, ಆಗಸ್ಟ್ 10, 2022
23 °C

ಮರು ಮೌಲ್ಯಮಾಪನ; ಹೆಚ್ಚಿನ ಅಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ತಾಲ್ಲೂಕಿನ ಬಟ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಎಂ.ವಿ.ಸುಮಂತ್ ಮತ್ತು ಜಿ.ಎ.ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿದ್ದಾರೆ.

ಎಂ.ವಿ.ಸುಮಂತ್ ಆಂಗ್ಲ ಭಾಷೆಯಲ್ಲಿ 5 ಹಾಗೂ ವಿಜ್ಞಾನದಲ್ಲಿ 3 ಹೆಚ್ಚಿನ ಅಂಕಗಳನ್ನು ಪಡೆದು ಒಟ್ಟು 597 (ಶೇ 95.5) ಅಂಕಗಳನ್ನು ಗಳಿಸಿ ತಾಲ್ಲೂಕಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಲ್ಲಿ ದ್ವಿತೀಯ ಸ್ಥಾನಕ್ಕೆ ಏರಿದ್ದಾರೆ.

ಜಿ.ಎ.ವರ್ಷಾ ಕನ್ನಡದಲ್ಲಿ 9 ಹಾಗೂ ವಿಜ್ಞಾನದಲ್ಲಿ 4 ಹೆಚ್ಚಿನ ಅಂಕಗಳನ್ನು ಪಡೆಯುವ ಮೂಲಕ ಒಟ್ಟು 581 (ಶೇ.93) ಅಂಕಗಳನ್ನು ಗಳಿಸಿದ್ದಾರೆ ಎಂದು ಮುಖ್ಯಶಿಕ್ಷಕ ಎಂ.ಎಸ್.ಶ್ರೀನಿವಾಸಪ್ಪ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.