ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಗ ತ್ಯಾಜ್ಯ ಸಂಸ್ಕರಣೆ ಘಟಕ ಆರಂಭಿಸಿ

ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಿಇಒ
Last Updated 2 ಜೂನ್ 2020, 12:39 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಘನ ಮತ್ತು ದ್ರವ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ನಿಗದಿತ ಅವಧಿಯೊಳಗೆ ಸ್ಥಾಪಿಸಿ, ಕಾರ್ಯಾಚರಣೆ ಆರಂಭಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಗೌರಿಬಿದನೂರು ತಾಲ್ಲೂಕಿನ ನಾಮಗೊಂಡ್ಲು, ಹುದುಗೂರು, ಮುದ್ದಲೋಡು, ವಾಟದಹೊಸಹಳ್ಳಿ, ಗುಡಿಬಂಡೆ ತಾಲ್ಲೂಕಿನ ದಪ್ಪರ್ತಿ ಹಾಗೂ ಬಾಗೇಪಲ್ಲಿ ತಾಲ್ಲೂಕಿನ ತೊಳ್ಳಪಲ್ಲಿ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕಗಳ ನಿರ್ಮಾಣ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದ ಫೌಜಿಯಾ ಅವರು ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಿದರು.

‘ಘಟಕಗಳನ್ನು ಆರಂಭಿಸಲು ಬಾಕಿ ಇರುವ ಸಿವಿಲ್ ಕಾಮಗಾರಿಗಳನ್ನು ಮುಗಿಸಲು ಸಂಬಂಧಪಟ್ಟ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಆಯಾ ತಾಲ್ಲೂಕುಗಳ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದವರು ಮತ್ತು ಕಾರ್ಯನಿರ್ವಾಹಣಾಧಿಕಾರಿಗಳು ಸೇರಿ ಕಾಲಮಿತಿ ಒಳಗೆ ಕ್ರಮಕೈಗೊಳ್ಳಬೇಕು’ ಎಂದು ಸೂಚಿಸಿದರು.

ಗೌರಿಬಿದನೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಮುನಿರಾಜ್, ಬಾಗೇಪಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಮಂಜುನಾಥ್ ಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT