ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗೇಪಲ್ಲಿ: ವಿದ್ಯಾರ್ಥಿನಿಲಯ ಕಟ್ಟಡಕ್ಕೆ ಭೂಮಿಪೂಜೆ

Published 12 ಆಗಸ್ಟ್ 2023, 12:53 IST
Last Updated 12 ಆಗಸ್ಟ್ 2023, 12:53 IST
ಅಕ್ಷರ ಗಾತ್ರ

ಬಾಗೇಪಲ್ಲಿ: ‘ಪಟ್ಟಣದ ಡಾ.ಎಚ್.ಎನ್.ವೃತ್ತ (ಗೂಳೂರು ವೃತ್ತ)ದಲ್ಲಿ ವಿದ್ಯಾರ್ಥಿನಿಲಯದ ಆವರಣದಲ್ಲಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ₹6.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು’ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.

ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡಕ್ಕೆ ಭೂಮಿ ಪೂಜೆ ನಿರ್ವಹಿಸಿ ಮಾತನಾಡಿ, ‘ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿನಿಯರಿಗೆ ನೆರವಾಗಲು ವಿದ್ಯಾರ್ಥಿನಿಲಯ ನಿರ್ಮಿಸಲಾಗುವುದು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕಟ್ಟಡ ನಿರ್ಮಾಣಕ್ಕೆ ₹60 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಉಳಿದ ಕಟ್ಟಡದ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇನೆ. ₹6 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ ಎಂದರು.

ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸರ್ಕಾರ ವಿವಿಧ ಇಲಾಖೆ, ನಿಗಮಗಳ ಮೂಲಕ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದೆ. ತಾಲ್ಲೂಕಿನ ಕಿತ್ತೂರುರಾಣಿ ಚೆನ್ಮಮ್ಮ, ಮೊರಾರ್ಜಿ ಶಾಲಾ ಕಟ್ಟಡ ನಿರ್ಮಾಣ ಮಾಡಿ ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಗಮನ ನೀಡಿ, ಅನುದಾನ ಬಿಡುಗಡೆ ಮಾಡಿಸಿದ್ದೇನೆ. ₹2 ಕೋಟಿ ವೆಚ್ಚದಲ್ಲಿ ಪೀಠೋಪಕರಣ ಖರೀದಿ ಮಾಡಲಾಗುವುದು. ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿ.ತೇಜಾನಂದಾರೆಡ್ಡಿ ಮಾತನಾಡಿ, ಪಟ್ಟಣದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಲ್ಲಿ ₹6.5 ಕೋಟಿ  ವೆಚ್ಚದಲ್ಲಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ಕಟ್ಟಡ ನಿರ್ಮಿಸಿ, ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ವಿ.ರಮೇಶ್, ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕ ಸಿ.ಎನ್.ಶೇಷಾದ್ರಿ, ಲೋಕೊಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್‌ ಎಚ್.ಎಸ್.ಆರ್.ಪ್ರದೀಪ್, ಎಂಜಿನಿಯರ್‌ ಜೆ.ಎನ್.ಪೂಜಪ್ಪ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎ.ನಂಜುಂಡಪ್ಪ, ಪುರಸಭಾ ಸದಸ್ಯ ಗಡ್ಡಂರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT