ಗೌರಿಬಿದನೂರು: ಮಂಚೇನಹಳ್ಳಿ ತಾಲ್ಲೂಕಿನ ಅರ್ಕುಂದ ಗ್ರಾಮದ ಬೆಟ್ಟದ ತಪ್ಪಲಿನಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಕಲ್ಲುಗಳ ಸ್ಫೋಟದ ಶಬ್ದದಿಂದ ಚಿರತೆಗಳು ಗ್ರಾಮಗಳ ಜಮೀನುಗಳಿಗೆ ನುಗ್ಗುತ್ತಿವೆ. ಹೀಗಾಗಿ, ಕಲ್ಲು ಗಣಿಗಾರಿಕೆ ತಡೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರೈತರು ತಹಶೀಲ್ದಾರ್ಗೆ ಶುಕ್ರವಾರ ಮನವಿ ಸಲ್ಲಿಸಿದರು.

ಈ ಭಾಗದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದ ಎರಡು ಚಿರತೆಗಳು ಹಸು ಮತ್ತು ಕುರಿಗಳನ್ನು ತಿಂದುಹಾಕಿದ್ದವು. ಇದರಿಂದ ರೈತರು ಜಮೀನುಗಳಿಗೆ ತೆರಳಲು ಹೆದರುತ್ತಿದ್ದಾರೆ. ಅರ್ಕುಂದ ಸುತ್ತಮುತ್ತ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯೇ ಇದಕ್ಕೆ ಕಾರಣ. ಸಂಬಂಧಪಟ್ಟ ಅಧಿಕಾರಿಗಳು ಕಲ್ಲು ಗಣಿಗಾರಿಕೆಗೆ ನಿರ್ಬಂಧ ಹೇರಬೇಕು. ಜೊತೆಗೆ ಈ ಭಾಗದಲ್ಲಿ ಆಗ್ಗಾಗ್ಗೆ ಕಾಣಿಸಿಕೊಳ್ಳುತ್ತಿರುವ ಚಿರತೆಗಳನ್ನು ಹಿಡಿದು, ಸುರಕ್ಷಿತ ಪ್ರದೇಶಕ್ಕೆ ಬಿಡಬೇಕು ಎಂದು ತಹಶೀಲ್ದಾರ್ ಪೂರ್ಣಿಮಾ ಅವರಿಗೆ ಕರ್ನಾಟಕ ರೈತ ಸಂಘ ಮತ್ತು ರಾಜ್ಯ ಹಸಿರು ಸೇನೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ವೇಳೆ ಸಂಘದ ತಾಲ್ಲೂಕು ಅಧ್ಯಕ್ಷ ಲೋಕೇಶ್ ಗೌಡ, ಹಿರೇಬಿದನೂರು ರಾಜಣ್ಣ ಹಾಗೂ ಪದಾಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.