ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗೇಪಲ್ಲಿ: ಕಳಪೆ ರಾಗಿ ವಿತರಣೆ ನಿಲ್ಲಿಸಿ- ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ

ಬಾಗೇಪಲ್ಲಿ ತಾಲ್ಲೂಕು ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ
Last Updated 29 ಡಿಸೆಂಬರ್ 2021, 6:13 IST
ಅಕ್ಷರ ಗಾತ್ರ

ಬಾಗೇಪಲ್ಲಿ: ‘ತಾಲ್ಲೂಕಿನ ಪಡಿತರ ಅಂಗಡಿಗಳಲ್ಲಿ ಪಡಿತರ ಚೀಟಿಗಳಿಗೆ ಕಳಪೆ ಗುಣಮಟ್ಟದ ರಾಗಿಯನ್ನು ವಿತರಣೆ ಮಾಡಲಾಗುತ್ತಿದೆ’ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಸಮಿತಿಯ ಮುಖಂಡರು ಮಂಗಳವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.

ಪಟ್ಟಣದ ಡಾ.ಎಚ್.ಎನ್.ವೃತ್ತದಿಂದ ಹೊರಟ ಪ್ರತಿಭಟನಾ ಮುಖ್ಯರಸ್ತೆಯಲ್ಲಿ ಸಂಚರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಮಹಿಳಾ ಸಂಚಾಲಕಿ ಸಿ.ಉಮಾ ಮಾತನಾಡಿ, ‘ತಾಲ್ಲೂಕಿನಲ್ಲಿ ಪಡಿತರ ಚೀಟಿಗಳನ್ನು ಸಾಮಾನ್ಯ, ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ, ಪಂಗಡದವರು, ಬಡತನ ರೇಖೆಗಿಂತ ಕಡಿಮೆ ಇರುವವರು ಪಡೆದಿದ್ದಾರೆ. ಪಡಿತರ ಚೀಟಿದಾರರಿಗೆ ಅಂಗಡಿಗಳಲ್ಲಿ ಕಳಪೆ ಮಟ್ಟದ ರಾಗಿ ವಿತರಣೆ ಮಾಡುತ್ತಿದ್ದಾರೆ. ಇದರಿಂದ ಜನಸಾಮಾನ್ಯರು ಮನೆಗಳಲ್ಲಿ ಊಟ ಮಾಡಲು ತೊಂದರೆ ಆಗಿದೆ. ಕೂಡಲೇ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ಮಾಡಬೇಕು. ರಾಗಿ, ಅಕ್ಕಿ ಸೇರಿದಂತೆ ಪಡಿತರ ಚೀಟಿಯ ಪದಾರ್ಥಗಳ ಗುಣಮಟ್ಟದ ಬಗ್ಗೆ ತನಿಖೆ ಮಾಡಿಸಬೇಕು. ಗುಣಮಟ್ಟದ ರಾಗಿಯನ್ನು ಖರೀದಿಸಿ ವಿತರಣೆ ಮಾಡಬೇಕು’ ಎಂದು ಮನವಿ ಮಾಡಿದರು.

ಪ್ರತಿಭಟನಾ ಸ್ಥಳಕ್ಕೆ ಗ್ರೇಡ್-2 ತಹಶೀಲ್ದಾರ್ ಸುಬ್ರಮಣ್ಯಂ ಆಗಮಿಸಿ ಮನವಿ ಸ್ವೀಕರಿಸಿದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸಂಚಾಲಕ ಲಕ್ಷ್ಮಣರೆಡ್ಡಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಟಿ.ರಘುನಾಥರೆಡ್ಡಿ, ಉಪಾಧ್ಯಕ್ಷ ವಿ.ಚೌಡರೆಡ್ಡಿ, ನಾರಾಯಣಸ್ವಾಮಿ, ಮುಖಂಡ ಶ್ರೀನಿವಾಸ್, ತಿಪ್ಪೇನಾಯಕ, ಚಾಂದ್ ಭಾಷ, ಕೆ.ವೆಂಕಟರೆಡ್ಡಿ, ಬೈರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT