ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷಗಳ ಸಾಧನೆ ಶೂನ್ಯ. ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ. ಯಾರು ಏನೇ ಆಗಲಿ ಲೂಟಿ ಹೊಡೆಯಬೇಕು ಎಂಬ ದೃಢ ನಿರ್ಧಾರದೊಂದಿಗೆ ರಾಜ್ಯ ಸರ್ಕಾರ ಮುನ್ನಡೆಯುತ್ತಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.

ಇಲ್ಲಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರವು ಕಳೆದ ಮೂರು ವರ್ಷಗಳಿಂದ ಸಾಧನಾ ಸಮಾವೇಶಗಳನ್ನು ಮಾಡುತ್ತಲೇ ಇದೆ. ಆದರೆ ಈ ಸರ್ಕಾರದಿಂದ ರಾಜ್ಯದ ಜನರು ವೇದನೆ ಅನುಭವಿಸುತ್ತಿದ್ದಾರೆ. ಯಾರು ಏನೇ ಆದರೂ ಐದು ವರ್ಷ ಲೂಟಿ ಹೊಡೆಯಬೇಕು ಎಂಬ ದೃಢ ಸಂಕಲ್ಪದೊಂದಿಗೆ ಕಾಂಗ್ರೆಸ್ ಸರ್ಕಾರ ಮುನ್ನಡೆಯುತ್ತಿದೆ ಎಂದು ಟೀಕಿಸಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಸರ್ಕಾರವೇ ಈ ವರ್ಷ ಅಭಿವೃದ್ಧಿಗೆ ಹಣ ಕೊಡಲು ಸಾಧ್ಯವಿಲ್ಲ ಎಂದು ಒಪ್ಪಿಕೊಂಡ ಪರಿಸ್ಥಿತಿ ಇದೆ. ಗ್ಯಾರಂಟಿಗಳಿಂದ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ ಎಂದರು.

ಗೃಹ ಹಾಗೂ ಕೈಗಾರಿಕಾ ವಿದ್ಯುತ್ ದರಗಳನ್ನು ಹಂತ ಹಂತವಾಗಿ ಹೆಚ್ಚಿಸಲಾಯಿತು. ಕೈಗಾರಿಕೆಗಳಿಗೆ ಯುನಿಟ್ಗೆ ₹ 2.89 ರವರೆಗೆ ಹೆಚ್ಚಳ ಮಾಡಲಾಗಿದೆ. ನಂದಿನಿ ಹಾಲಿನ ದರವನ್ನು ಲೀ.ಗೆ ₹ 4 ಹೆಚ್ಚಿಸಿ ಸಾಮಾನ್ಯ ಜನರ ಮೇಲೆ ಹೆಚ್ಚುವರಿ ಹೊರೆ ಹಾಕಲಾಯಿತು. ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಿಸಿ ಜನರ ದೈನಂದಿನ ಬದುಕಿನ ವೆಚ್ಚವನ್ನು ಹೆಚ್ಚಿಸಿತು. ಮದ್ಯ ಹಾಗೂ ಬಿಯರ್ ಮೇಲಿನ ಸುಂಕ ಹೆಚ್ಚಿಸಿ ಜನರ ಮೇಲೆ ಹೆಚ್ಚುವರಿ ಹೊರೆ ಹಾಕಲಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಸ್ ಪ್ರಯಾಣ ದರ ಏರಿಕೆ ಮಾಡಿ ಸಾಮಾನ್ಯ ಪ್ರಯಾಣಿಕರಿಗೆ ಹೊರೆ ತಂದರು. ಆಸ್ತಿ ನೋಂದಣಿ ಶುಲ್ಕ ಮತ್ತು ಮುದ್ರಾಂಕ ಹೆಚ್ಚಿಸಿ ಮನೆ ಖರೀದಿದಾರರಿಗೆ ಹೆಚ್ಚುವರಿ ಹೊರೆ ತಂದರು. ನಗರ ಪ್ರದೇಶಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳದಿಂದ ಮಧ್ಯಮ ವರ್ಗ ಸಂಕಷ್ಟಕ್ಕೆ ಸಿಲುಕಿದೆ ಎಂದರು.

ಅನರ್ಹರಿಗೆ ಸೌಲಭ್ಯ ಸಿಕ್ಕಿದೆ. ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳ ಸ್ಥಗಿತವಾಗಿವೆ. ಪಂಚಾಯಿತಿ ಮತ್ತು ಸ್ಥಳೀಯ ಅಭಿವೃದ್ಧಿ ಕಾಮಗಾರಿಗಳಿಗೆ ಹಣದ ಕೊರತೆ ಎದುರಾಗಿದೆ ಎಂದು ಟೀಕಿಸಿದರು.

ಆರೋಗ್ಯ ಸೇವೆಗಳ ಶುಲ್ಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಬಳಕೆದಾರರ ಶುಲ್ಕ, ಸರ್ಕಾರಿ ಕಾಲೇಜು ಶುಲ್ಕ, ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಶುಲ್ಕ ಹೆಚ್ಚಿಸಲಾಗಿದೆ. ವಿದ್ಯುತ್, ಹಾಲು, ಸಾರಿಗೆ, ಮದ್ಯದ ತೆರಿಗೆ ಏರಿಕೆಯಿಂದ ಜೀವನ ವೆಚ್ಚ ಹೆಚ್ಚಿದೆ ಎಂದರು.

ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನಡುವಿನ ಅಧಿಕಾರದ ಸಂಘರ್ಷ ಆಡಳಿತದ ಮೇಲೆ ಪರಿಣಾಮ ಬೀರಿದೆ. ಅಧಿಕಾರಿಗಳ ವರ್ಗಾವಣೆಗಳಲ್ಲಿ ರಾಜಕೀಯ ಹಸ್ತಕ್ಷೇಪ ಮತ್ತು ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಸೀಕಲ್ ರಾಮಚಂದ್ರಗೌಡ, ಉಪಾಧ್ಯಕ್ಷ ಮರಳಕುಂಟೆ ಕೃಷ್ಣಮೂರ್ತಿ, ಕೆ.ಬಿ.ಮುರಳಿ, ಎ.ಬಿ.ಬೈರೇಗೌಡ, ಲಕ್ಷ್ಮಿಪತಿ, ಆರ್.ಎನ್.ಅಶೋಕ್, ಬಾಲಕುಂಟಹಳ್ಳಿ ಗಂಗಾಧರಪ್ಪ, ಪ್ರಭಾಕರ್ ರೆಡ್ಡಿ, ತೇಜೇಂದ್ರ ಪಾಪು, ಲಕ್ಷ್ಮಿನಾರಾಯಣ ಗುಪ್ತ, ವಿ.ಮಧುಚಂದ್ರ, ನರೇಂದ್ರಬಾಬು ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-16-1122702274

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.