ಶುಕ್ರವಾರ, ಡಿಸೆಂಬರ್ 4, 2020
20 °C

‘ಸಂಘದ ಅಭಿವೃದ್ಧಿಗೆ ಶ್ರಮಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೌರಿಬಿದನೂರು: ತಾಲ್ಲೂಕಿನ ಡಿ. ಪಾಳ್ಯ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವಸದಸ್ಯರ ಸಾಮಾನ್ಯ ಸಭೆಯು ಶನಿವಾರ ನಡೆಯಿತು.

ಸಂಘದ ಅಧ್ಯಕ್ಷ ತಿಪ್ಪಣ್ಣ ಮಾತನಾಡಿ, ‘ಉತ್ಪಾದಕರು ರಾಸುಗಳಿಗೆ ಪೌಷ್ಟಿಕ ಆಹಾರ ನೀಡುವ ಮೂಲಕ ಹಾಲಿನ ಗುಣಮಟ್ಟವನ್ನು ಕಾಪಾಡಬೇಕಾಗಿದೆ. ಸಾಕಾಣಿಕೆದಾರರು ರಾಸುಗಳ ಪೋಷಣೆಯನ್ನು ಸರಿಯಾಗಿ ಮಾಡಿದರೆ ಮಾತ್ರ ಗುಣಮಟ್ಟದ ಹಾಲು ಪಡೆಯಲು ಸಾಧ್ಯ. ಇದರಿಂದ ಸಂಘದ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ’ ಎಂದು ಹೇಳಿದರು.

ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಗಜರಾಜ್ ಶಿ. ರಣತೂರ್ ಮಾತನಾಡಿ, ಒಕ್ಕೂಟದಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.

ಕೋವಿಡ್ ಸಂದರ್ಭದಲ್ಲಿ ಒಕ್ಕೂಟವು ಹಾಲು ಉತ್ಪಾದಕರ ನೆರವಿಗೆ ಸದಾ ಬದ್ಧವಿದೆ. ಗುಣಮಟ್ಟದ ‌ಹಾಲನ್ನು ನೀಡುವ ಮೂಲಕ ಸಂಘದ ಅಭಿವೃದ್ಧಿಗೆ ಎಲ್ಲ ಸದಸ್ಯರು ಶ್ರಮಿಸಬೇಕಿದೆ ಎಂದು ಹೇಳಿದರು.

ಸಭೆಯಲ್ಲಿ ಸಂಘಕ್ಕೆ ಹಾಲು ಪೂರೈಸುವ ಎಲ್ಲಾ ಹಾಲು ಉತ್ಪಾದಕರಿಗೆ 10 ಲೀಟರ್ ಸಾಮರ್ಥ್ಯದ ಸ್ಟೀಲ್ ಕ್ಯಾನ್  ವಿತರಿಸಲಾಯಿತು.

ಒಕ್ಕೂಟದ ವಿಸ್ತರಣಾಧಿಕಾರಿ ಕೆ.ಸಿ‌. ಕಿರಣ್ ಕುಮಾರ್, ಎ. ಮಂಜುನಾಥ್, ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು