ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಡ್ಲಘಟ್ಟ: ಪ್ರಿಯಕರನೊಂದಿಗೆ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ | ಪ್ರಿಯಕರನ ವಿರುದ್ಧ ಪೋಕ್ಸೊ ಪ್ರಕರಣ
Published : 14 ಸೆಪ್ಟೆಂಬರ್ 2024, 14:39 IST
Last Updated : 14 ಸೆಪ್ಟೆಂಬರ್ 2024, 14:39 IST
ಫಾಲೋ ಮಾಡಿ
Comments

ಶಿಡ್ಲಘಟ್ಟ: ತಾಲ್ಲೂಕಿನ ಚಿಕ್ಕದಾಸೇನಹಳ್ಳಿ-ಬೀರಪ್ಪನಹಳ್ಳಿ ಮಾರ್ಗದ ಮಾವಿನ ಮರದ ತೋಪಿನಲ್ಲಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮತ್ತು ಆಕೆಯ ಪ್ರಿಯಕರ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೋಕ್ಸೊ ಅಡಿ ಬಂಧಿತನಾಗಿದ್ದ ಚಿಂತಾಮಣಿ ತಾಲ್ಲೂಕಿನ ಸೀತಾರಾಮಪುರದ ನವೀನ್ (20) ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದ ಬಾಲಕಿಯರ ಬಾಲ ಮಂದಿರದ ವಶದಲ್ಲಿದ್ದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಶಾಲೆಗೆ ಬಂದಿದ್ದ ಬಾಲಕಿ ಶಾಲಾ ಸಮವಸ್ತ್ರದಲ್ಲೇ ಯುವಕನೊಂದಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳದಲ್ಲಿ ಆಕೆಯ ಬ್ಯಾಗು, ಪುಸ್ತಕಗಳು ದೊರೆತಿವೆ.

ವೃತ್ತಿಯಲ್ಲಿ ಸರಕು ಸಾಗಣೆ ವಾಹನದ ಕ್ಲೀನರ್ ಆಗಿದ್ದ ನವೀನ್‌ ಹಾಗೂ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿನಿ ಪರಸ್ಪರ ಪ್ರೀತಿಸುತ್ತಿದ್ದರು. 

ಇಬ್ಬರ ಪ್ರೀತಿಗೆ ಕುಟುಂಬದವರ ವಿರೋಧವಿತ್ತು. ಮಾರ್ಚ್‌ನಲ್ಲಿ ಬಾಲಕಿ ಕುಟುಂಬದವರು ನವೀನ್ ವಿರುದ್ಧ ಚಿಂತಾಮಣಿಯ ಬಟ್ಲಹಳ್ಳಿಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೋಕ್ಸೊ ಅಡಿ ಪ್ರಕರಣ ದಾಖಲಾಗಿತ್ತು. ನ್ಯಾಯಾಂಗ ಬಂಧನಲ್ಲಿದ್ದ ನವೀನ್‌ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆ ಆಗಿದ್ದ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT