ಬಸ್‌ನಿಂದ ಬಿದ್ದು ವಿದ್ಯಾರ್ಥಿ ಸಾವು

7

ಬಸ್‌ನಿಂದ ಬಿದ್ದು ವಿದ್ಯಾರ್ಥಿ ಸಾವು

Published:
Updated:

ಚಿಕ್ಕಬಳ್ಳಾಪುರ: ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಗುರುವಾರ ಸಂಜೆ ಬಸ್‌ನ ಕಿಟಕಿ ಏರಿ ಬ್ಯಾಗ್‌ ಇಟ್ಟು ಸೀಟು ಕಾಯ್ದಿರಿಸಲು ಮುಂದಾದ ವಿದ್ಯಾರ್ಥಿಯೊಬ್ಬ ಆಯತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಗೌರಿಬಿದನೂರು ತಾಲ್ಲೂಕಿನ ಬಿ.ಬೊಮ್ಮಸಂದ್ರದ ನಿವಾಸಿ ಚರಣ್‌ಕುಮಾರ್(೧೮) ಮೃತ ವಿದ್ಯಾರ್ಥಿ. ನಗರದ ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓದುತ್ತಿದ್ದ ಚರಣ್‌ಕುಮಾರ್ ಊರಿಗೆ ವಾಪಸ್ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಚರಣ್‌ಕುಮಾರ್ ಕಿಟಕಿ ಏರಿ ಬ್ಯಾಗ್ ಒಳಗೆ ಹಾಕುತ್ತಿದ್ದ ವೇಳೆ ಚಾಲಕ ಏಕಾಏಕಿ ಬಸ್ ಹಿಂದಕ್ಕೆ ಚಲಾಯಿಸಿದ್ದಾನೆ. ಈ ವೇಳೆ ಆಯತಪ್ಪಿ ಬಸ್‌ನಿಂದ ಬಿದ್ದ ವಿದ್ಯಾರ್ಥಿ ತಲೆ ಸಿಮೆಂಟ್ ನೆಲಹಾಸಿಗೆ ಬಡಿದು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದರು.ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಯಿತು. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !