ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ | ಎಸ್‌ಯುಸಿಐ; ವಿದ್ಯಾರ್ಥಿ ಪ್ರಣಾಳಿಕೆ

Published 23 ಏಪ್ರಿಲ್ 2024, 15:28 IST
Last Updated 23 ಏಪ್ರಿಲ್ 2024, 15:28 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಎಐಡಿಎಸ್‌ಒ ಸಂಘಟನೆಯು ವಿದ್ಯಾರ್ಥಿಗಳ ಪ್ರಣಾಳಿಕೆ ಸಿದ್ಧಗೊಳಿಸಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎಸ್‌ಯುಸಿಐ ಪಕ್ಷದ ಅಭ್ಯರ್ಥಿ ಕಲಾವತಿ ಎನ್. ಅವರಿಗೆ ಮಂಗಳವಾರ ಸಂಘಟನೆ ಸದಸ್ಯರು ಪ್ರಣಾಳಿಕೆಯನ್ನು ಸಲ್ಲಿಸಿದರು.

ಎನ್‌ಇಪಿ ಹಿಂಪಡೆಯಬೇಕು, ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು, ನಾಲ್ಕು ವರ್ಷದ ಪದವಿಯನ್ನು ಹಿಂಪಡೆಯಬೇಕು, ಸರ್ಕಾರಿ‌ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕು ಹಾಗೂ ಇನ್ನಿತರ ಆಗ್ರಹಗಳನ್ನೊಳಗೊಂಡ ವಿದ್ಯಾರ್ಥಿ ಪ್ರಣಾಳಿಕೆಯ ಬಗ್ಗೆ ಚರ್ಚಿಸಲು ಹಾಗೂ ಇದನ್ನು ಅನುಷ್ಠಾನಗೊಳಿಸುವಂತೆ ಮನವಿ ಮಾಡಲಾಯಿತು.

ಶಿಕ್ಷಣಕ್ಕಾಗಿ ಕೇಂದ್ರ ಬಜೆಟ್‌ನಲ್ಲಿ ಶೇ 10 ಮತ್ತು ರಾಜ್ಯ ಬಜೆಟ್‌ನಿಂದ ಶೇ 30 ರಷ್ಟು ಹಣ ಮೀಸಲಿಡಬೇಕು. ಸರ್ವರಿಗೂ ವೈಜ್ಞಾನಿಕ, ಧರ್ಮನಿರಪೇಕ್ಷ, ಪ್ರಜಾಸತ್ತಾತ್ಮಕ ಮತ್ತು ಉಚಿತ ಶಿಕ್ಷಣವನ್ನು ಖಾತ್ರಿಪಡಿಸಬೇಕು. ವಿಲೀನದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ನಿಲ್ಲಿಸಬೇಕು. ಎಲ್ಲಾ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಮೂಲ ಸೌಕರ್ಯಗಳನ್ನು ಸುಧಾರಿಸಲು ಹಣ ಬಿಡುಗಡೆ ಮಾಡಬೇಕು ಎನ್ನುವ ಅಂಶಗಳು ಪ್ರಣಾಳಿಕೆಯಲ್ಲಿ ಇವೆ. ಒಟ್ಟು 18 ಅಂಶಗಳ ಬಗ್ಗೆ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಲಾಗಿದೆ.

ಎಐಡಿಎಸ್‌ಒ ಅಧ್ಯಕ್ಷ ವಿ.ಎನ್ ರಾಜಶೇಖರ್, ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಹಾಗೂ ಬೆಂಗಳೂರು ಜಿಲ್ಲಾ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT