ಚಿಕ್ಕಬಳ್ಳಾಪುರ: ತಾಲ್ಲೂಕಿನ ಪೆರೇಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಸೋಮವಾರ ಸಂಜೆ ಲೈಂಗಿಕ ದೌರ್ಜನ್ಯ ನಡೆದಿದೆ. ಈ ಸಂಬಂಧ ಗಣೇಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿದ್ಯಾರ್ಥಿನಿ ಬಾಗೇಪಲ್ಲಿಯ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿನಿ ಮನೆಗೆ ತೆರಳಲು ಪೆರೇಸಂದ್ರದಲ್ಲಿ ಇದ್ದರು. ಆರೋಪಿ ಮನೆಗೆ ಬಿಡುವುದಾಗಿ ಬೈಕ್ಗೆ ಹತ್ತಿಸಿಕೊಂಡಿದ್ದಾನೆ. ನಂತರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದೌರ್ಜನ್ಯ ನಡೆಸಿದ್ದಾನೆ.

ವಿದ್ಯಾರ್ಥಿನಿ ಬಟ್ಟೆ ಹರಿದು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ಪ್ರಜ್ಞೆ ತಪ್ಪಿದ್ದಾರೆ. ಆರೋಪಿ ಕೃತ್ಯದ ಬಗ್ಗೆ ತನ್ನ ಸ್ನೇಹಿತನಿಗೆ ಕರೆ ಮಾಡಿ ಮಾಹಿತಿ ನೀಡಿದ್ದ. ಆ ಸ್ನೇಹಿತ ಈ ವಿಚಾರವನ್ನು ಮತ್ತೊಬ್ಬರಿಗೆ ತಿಳಿಸಿದ್ದು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಪ್ರಕರಣದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಮೊಬೈಲ್ ಕರೆಯ ಜಾಡು ಆಧರಿಸಿ ಆರೋಪಿಯನ್ನು ಪೊಲೀಸರು ಸೋಮವಾರ ನಡುರಾತ್ರಿಯೇ ವಶಕ್ಕೆ ಪಡೆದಿದ್ದಾರೆ. ಪೆರೇಸಂದ್ರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.