ಶುಕ್ರವಾರ, ಡಿಸೆಂಬರ್ 4, 2020
22 °C

ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: 2019-20ನೇ ಸಾಲಿನಡಿ 10ನೇ ತರಗತಿಯ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ ಹಾಗೂ 8ನೇ ತರಗತಿಯ ವಿದ್ಯಾರ್ಥಿಗಳಿಗೆ ನ್ಯಾಷನಲ್ ಮಿನ್ಸ್-ಕಮ್-ಮೆರಿಟ್ ಸ್ಕಾಲರ್‌ಷಿಪ್ ಪರೀಕ್ಷೆಯು ಜ. 24ರಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ.

ಈ ಸಂಬಂಧ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯ ಈ ಪರೀಕ್ಷೆಗಳಿಗೆ (http://kseeb.kar.nic.in) ವೆಬ್‌ಸೈಟ್‌ನಲ್ಲಿ  ಮುಖ್ಯಶಿಕ್ಷಕರು ಲಾಗಿನ್ ಆಗಿ ನ. 30ರೊಳಗೆ ವಿದ್ಯಾರ್ಥಿಗಳ ಅರ್ಜಿ ಸಲ್ಲಿಸಬೇಕಿದೆ.

ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಪಾವತಿ ಮತ್ತು ಇತರೆ ಮಾಹಿತಿಯು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯ ವೆಬ್‍ಸೈಟ್‍ನಲ್ಲಿ ಲಭ್ಯವಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ತಾಲ್ಲೂಕು ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಜಿಲ್ಲಾ ಹಂತದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮತ್ತು ಉಪ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು