ಶುಕ್ರವಾರ, ಮೇ 27, 2022
31 °C

ಬಸ್‌ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಕೋವಿಡ್ ನಿಯಂತ್ರಣಗೊಂಡ ಬಳಿಕ ಶಾಲಾ-ಕಾಲೇಜುಗಳನ್ನು ಆರಂಭಿಸಿದರೂ ಸಮರ್ಪಕವಾಗಿ ಗ್ರಾಮೀಣ ಸಾರಿಗೆ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಸಾರಿಗೆ ಬಸ್ಸುಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದರು.

‘ಶಿಡ್ಲಘಟ್ಟದಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ಬೆಳಗ್ಗೆ 15 ನಿಮಿಷಕ್ಕೆ ಒಂದು ಸಾರಿಗೆ ಬಸ್ ಈ ಹಿಂದೆ ಕಲ್ಪಿಸಲಾಗಿತ್ತು. ಆದರೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಬಸ್ ಸಂಚಾರ ಕಡಿಮೆಗೊಳಿಸಿದರಿಂದ ವಿದ್ಯಾರ್ಥಿಗಳು ಸಕಾಲಕ್ಕೆ ಶಾಲಾ-ಕಾಲೇಜುಗಳು ಹೋಗಲು ತೊಂದರೆ ಅನುಭವಿಸುವಂತಾಗಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಶಿಡ್ಲಘಟ್ಟ- ಚಿಕ್ಕಬಳ್ಳಾಪುರ ಮಾರ್ಗದ ರಾಷ್ಟ್ರೀಯ ಹೆದ್ದಾರಿ 234 ಜಾತವಾರು ಬಳಿ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.

‘ಕೋವಿಡ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ.
ಆದರೆ ಗ್ರಾಮೀಣ ಪ್ರದೇಶದಲ್ಲಿ ಸಾರಿಗೆ ವ್ಯವಸ್ಥೆ ಸಮರ್ಪಕವಾಗಿ ಇಲ್ಲದೆ ಒಂದು ಬಸ್ಸಿನಲ್ಲಿ ಅಪಾರ ಸಂಖ್ಯೆಯಲ್ಲಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಇದರಿಂದ ಸೋಂಕು ಹರಡುವ ಭೀತಿ ಎದುರಾಗಿದೆ’ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಶಾಲಾ-ಕಾಲೇಜಿನ ಸಮಯದಲ್ಲಿ ಸಮರ್ಪಕವಾಗಿ ಸಾರಿಗೆ ಬಸ್ಸಿನ ಸಂಚಾರ ಮಾಡಬೇಕು ಜೊತೆಗೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್‌ ಚೇತನ್ ಗೌಡ ಹಾಗೂ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿ 15 ನಿಮಿಷಕ್ಕೊಮ್ಮೆ ಸಾರಿಗೆ ಬಸ್ಸಿನ ಸೌಲಭ್ಯ ಕಲ್ಪಿಸುವ ಜತೆಗೆ ಹೆಚ್ಚುವರಿಯಾಗಿ ಒಂದು ಸಂಚಾರವನ್ನು ಆರಂಭಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ವಾಪಸ್ ಪಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.