ಅತ್ಯಾಚಾರ ಖಂಡಿಸಿ ಬೀದಿಗಿಳಿದ ವಿದ್ಯಾರ್ಥಿಗಳು

7
ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ತಾಲ್ಲೂಕು ಕಚೇರಿ ಎದುರು ಎನ್‌ಎಸ್‌ಯುಐ ನೇತೃತ್ವದಲ್ಲಿ ಪ್ರತಿಭಟನೆ

ಅತ್ಯಾಚಾರ ಖಂಡಿಸಿ ಬೀದಿಗಿಳಿದ ವಿದ್ಯಾರ್ಥಿಗಳು

Published:
Updated:
Deccan Herald

ಚಿಕ್ಕಬಳ್ಳಾಪುರ: ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದ ಕೊಲೆಗೈದಿರುವುದನ್ನು ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟಿಸಿದರು.

ನಗರದ ಸರ್ಕಾರಿ ಜೂನಿಯರ್‌ ಕಾಲೇಜಿನಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ಶಿರಸ್ತೇದಾರ್ ಅವರಿಗೆ ಮನವಿ ಸಲ್ಲಿಸಿದರು.

ಸಂಘಟನೆ ರಾಜ್ಯ ಸಂಚಾಲಕ ಕುಂದಲಗುರ್ಕಿ ಮುನಿಂದ್ರ ಮಾಥನಾಡಿ, ‘ಈ ಪ್ರಕರಣ ದೇಶವೇ ಬೆಚ್ಚಿ ಬೀಳಿಸುವಂತೆ ಆಗಿದೆ. ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡಬೇಕಾದ ಸರ್ಕಾರಗಳು ಇಂತಹ ಪ್ರರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಭಯದ ವಾತಾವರಣದಲ್ಲಿ ಹೆಣ್ಣು ಮಕ್ಕಳು ಶಾಲಾ ಕಾಲೇಜುಗಳಿಗೆ ಹೋಗುವ ಸ್ಥಿತಿ ಇದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಗ್ರಾಮೀಣ ಹೆಣ್ಣುಮಕ್ಕಳು ದೂರದ ಪ್ರದೇಶದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಅಂತವರಿಗೆ ಸೂಕ್ತ ರಕ್ಷಣೆ ಇಲ್ಲ.  ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು, ಅತ್ಯಾಚಾರಗಳು, ಕೋಮುಗಲಭೆಗಳು ಹೆಚ್ಚುತ್ತಿವೆ. ಜನಸಾಮಾನ್ಯರಲ್ಲಿ ಭಯದ ವಾತಾವರಣ ಸೃಷ್ಟಿ ಆಗಿದೆ. ಸರ್ಕಾರ ಕಠಿಣ ಕ್ರಮ ಕೈಗೊಂಡು ಇವುಗಳನ್ನು ತಡೆಯಬೇಕಿತ್ತು. ಆದರೆ ಸಂಪೂರ್ಣ ವಿಫಲವಾಗಿದೆ’ ಎಂದು ಆರೋಪಿಸಿದರು.

‘ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಂತಹ ಪ್ರಕರಣಗಳು ಮರುಕಳುಹಿಸಿದಂತೆ ನೋಡಿಕೊಳ್ಳಬೇಕು. ಬಾಲಕಿಯ ಕುಟುಂಬಕ್ಕೆ ಪರಿಹಾರ ಘೋಷಿಸಬೇಕು’ ಎಂದು ಆಗ್ರಹಿಸಿದರು.

ಎನ್‌ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ನಾಗರ್ಜುನ್‌ ಮಾತನಾಡಿ, ‘ದೇಶದಲ್ಲಿ ದಿನೇ ದಿನೇ ಅತ್ಯಾಚಾರ, ಕೊಲೆಗಳು ಹೆಚ್ಚುತ್ತಿವೆ. ಈ ಕೃತ್ಯಗಳನ್ನು ತಡೆಯಲು ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಮೂಲಕ ವಿದ್ಯಾರ್ಥಿನಿಯರಲ್ಲಿ ಭಯವನ್ನು ತೊಡೆದುಹಾಕಬೇಕು’ ಎಂದರು.

ಕಾರ್ಯದರ್ಶಿ ಲಕ್ಷ್ಮೀನರಸಿಂಹ, ಜಿಲ್ಲಾ ಮುಂಖಡರಾದ ಕೇಶವ, ಸುಮಲತಾ, ಬಿಂದು, ಉಷಾ, ನಂದಿನಿ, ಸರಸ್ವತಿ, ಶೋಭಾ, ಮಂಜುಳಾ ಪ್ರತಿಭಟನೆಯಲ್ಲಿ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !