ಚಿಕ್ಕಬಳ್ಳಾಪುರ: ‘ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಬಂದಿದ್ದ ₹ 3 ಕೋಟಿ ಅನುದಾನವನ್ನು ಚಿಂತಾಮಣಿಗೆ ತೆಗೆದುಕೊಂಡು ಹೋಗಿದ್ದಾರೆ ಎಂದು ಕೆಲವರು ಆರೋಪ ಮಾಡಿದ್ದಾರೆ. ಆದರೆ ನಾನು ಆ ಮಟ್ಟದ ರಾಜಕಾರಣಿಯಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಿಂತಾಮಣಿಯಲ್ಲಿ ಸಾವಿರಾರು ಕೋಟಿಯ ಅಭಿವೃದ್ಧಿ ಕೆಲಸ ಮಾಡುತ್ತಿದ್ದೇನೆ. ಇಷ್ಟೇ ಪ್ರಮಾಣದ ಅಭಿವೃದ್ಧಿ ಕಾರ್ಯವನ್ನು ಚಿಕ್ಕಬಳ್ಳಾಪುರದಲ್ಲಿಯೂ ಮಾಡುತ್ತಿದ್ದೇನೆ. ಯಾರೊ ಕೆಲವು ಕ್ಷುಲ್ಲಕ ಮನಸ್ಥಿತಿಯವರು ಆ ರೀತಿಯಲ್ಲಿ ಆರೋಪಿಸಿದ್ದಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಾಸಕ ಪ್ರದೀಪ್ ಈಶ್ವರ್ ಜೊತೆ ಚಿಕ್ಕಬಳ್ಳಾಪುರ ಕ್ಷೇತ್ರದ 40 ಸಾವಿರ ಬಲಿಜಿಗರು ಇದ್ದಾರೆ ಎಂದಿರುವ ಶಾಸಕರ ಬೆಂಬಲಿಗರ ಮಾತಿಗೆ ಪ್ರತಿಕ್ರಿಯಿಸಿದ ಸಚಿವರು, ‘ನಾನು ಜಾತಿ ವಿಚಾರವನ್ನು ಉಲ್ಲೇಖಿಸಿ ಮಾತನಾಡುವುದಿಲ್ಲ. ನನಗೆ 25 ವರ್ಷಗಳ ರಾಜಕೀಯ ಅನುಭವವಿದೆ. ನನಗೆ ಎಲ್ಲ ಜಾತಿ, ವರ್ಗಗಳ ಜನರು ಮತ ನೀಡಿದ್ದಾರೆ. ಎಲ್ಲ ಜಾತಿಗಳ ಜನರ ಜೊತೆ ಇದ್ದೇನೆ. ಜಾತಿಗಳ ಹೆಸರಿನಲ್ಲಿ ರಾಜಕೀಯ ಮಾಡುವುದಿಲ್ಲ. ಅನುಭದ ಕೊರತೆ ಇದ್ದವರು ಈ ರೀತಿಯಲ್ಲಿ ಮಾತನಾಡುವರು ಎಂದು ಟೀಕಿಸಿದರು.

ಪ್ರದೀಪ್ ಈಶ್ವರ್ ವಿರುದ್ಧ ಮಾತನಾಡಿರುವ ಮೂವರಿಗೆ ನೋಟಿಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಡಾ.ಎಂ.ಸಿ.ಸುಧಾಕರ್, ‘ಪಕ್ಷವು ಈ ಬಗ್ಗೆ ತೀರ್ಮಾನಿಸುತ್ತದೆ’ ಎಂದರು.

ಸಚಿವ–ಶಾಸಕರ ಬಣಗಳ ಬಡಿದಾಟ

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಶಾಸಕ ಪ್ರದೀಪ್ ಈಶ್ವರ್ ಬೆಂಬಲಿತ ಕಾಂಗ್ರೆಸ್ ಮುಖಂಡರು ನಡುವೆ ವೈಮನಸ್ಸು ತಾರಕಕ್ಕೇರಿದೆ.

ಎರಡೂ ಬಣಗಳ ನಾಯಕರು ಮಾಧ್ಯಮಗೋಷ್ಠಿ ನಡೆಸಿ ಆರೋಪ, ಪ್ರತ್ಯಾರೋಪ ಮಾಡಿದ್ದರು.

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದ ಸಚಿವ ಡಾ.ಎಂ.ಸಿ.ಸುಧಾಕರ್ ಬೆಂಬಲಿಗರಾದ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನಿರ್ದೇಶಕರಾದ ಎನ್.ಸಿ.ವೆಂಕಟೇಶ್, ಕೆ.ಆರ್.ರಾಜಣ್ಣ ಮತ್ತು ನಗರಸಭೆ ಮಾಜಿ ಸದಸ್ಯ ಮಿಲ್ಟನ್ ವೆಂಕಟೇಶ್ಗೆ ಕಾರಣ ಕೇಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ನೋಟಿಸ್ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.