ಶನಿವಾರ, ಅಕ್ಟೋಬರ್ 19, 2019
27 °C
ಅನರ್ಹ ಶಾಸಕರಿಗೆ ಭಿಕ್ಷೆ ಬೇಡುವ ಸ್ಥಿತಿ

‘ಮಾತಿನ ಮೇಲೆ ಹಿಡಿತವಿರಲಿ’: ದಿನೇಶ್‌ ಗುಂಡೂರಾವ್‌ಗೆ ಸುಧಾಕರ್ ತಿರುಗೇಟು

Published:
Updated:

ಚಿಕ್ಕಬಳ್ಳಾಪುರ: ‘ಅನರ್ಹ ಶಾಸಕರು ಬಿಜೆಪಿ ಮುಖಂಡರ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿದೆ’ ಎಂಬ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಟೀಕೆಗೆ ಬುಧವಾರ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಅವರು ಟ್ವಿಟರ್‌ ಮೂಲಕ ತಿರುಗೇಟು ನೀಡಿದ್ದಾರೆ.

‘ಮಾನ್ಯ, ದಿನೇಶ್‌ ಗುಂಡೂರಾವ್ ಅವರೇ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ನಾವು ಭಿಕ್ಷುಕರಲ್ಲ. ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್‌ ಪಕ್ಷಕ್ಕೆ ಬಂದಿತು. ನಾವು ವಿಧಾನಸಭೆ ಚುನಾವಣೆಯಲ್ಲಿ 80 ಸ್ಥಾನಗಳನ್ನು ಗೆದ್ದಿದ್ದೆವು’ ಎಂದು ಸುಧಾಕರ್ ಅವರು ಟ್ವೀಟ್‌ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ದಿನೇಶ್‌ ಅವರು ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ, ‘ಅನರ್ಹ ಶಾಸಕರು ಕಾಂಗ್ರೆಸ್‌ನಲ್ಲಿ ರಾಜರಂತೆ ಇದ್ದರು. ಆದರೆ ಈಗ ಬಿಜೆಪಿ ನಾಯಕರ ಬಳಿ ಕೈಕಟ್ಟಿ ಭಿಕ್ಷೆ ಬೇಡುತ್ತಿದ್ದಾರೆ. ಬೆನ್ನಿಗೆ ಚೂರಿಹಾಕಿ ಹೋಗಿದ್ದು, ಅವರ ಪರಿಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಾಗಿದೆ. ಪಕ್ಷ ದ್ರೋಹಿಗಳನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ’ ಎಂಬ ಹೇಳಿಕೆ ನೀಡಿದ್ದರು.

Post Comments (+)