ಭಾನುವಾರ, ಸೆಪ್ಟೆಂಬರ್ 19, 2021
28 °C

ಚಿಕ್ಕಬಳ್ಳಾಪುರ: ಪ್ರತ್ಯೇಕ ಪ್ರಕರಣ; ಯುವಕ, ಯುವತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾನುವಾರ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದ ಯುವಕ ಮತ್ತು ಎಂಬಿಬಿಎಸ್ ಓದುತ್ತಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲದಿಂದ ಆತ್ಮಹತ್ಯೆ: ತಾಲ್ಲೂಕಿನ ಜಾತವಾರ ಗ್ರಾಮದ ಶ್ರವಣ್ ಗೌಡ (27) ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರವಣ್, ನಗರದಲ್ಲಿ ಬಟ್ಟೆ ಅಂಗಡಿಯನ್ನು ನಡೆಸುತ್ತಿದ್ದರು.

ಶ್ರವಣ್ ಬಟ್ಟೆ ಅಂಗಡಿಯನ್ನು ಇಟ್ಟುಕೊಂಡಿದ್ದ. ಸಾಲ ಸಹ ಹೆಚ್ಚಿತ್ತು. ಈ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಂಧ್ರಪ್ರದೇಶದ ಬಾಯಿಕೊಂಡ ಗಂಗಮ್ಮ ದೇವಾಲಯಕ್ಕೆ ಬೆಳಿಗ್ಗೆ ತೆರಳಿದ್ದ. ಸಂಜೆ ಮರಳಿದ್ದ. ಬಟ್ಟೆ ಅಂಗಡಿ ಬಾಗಿಲು ಮುಚ್ಚಿ ರಾತ್ರಿ ಮನೆಗೆ ಬಂದ. ಈ ವೇಳೆ ಅಸ್ವಸ್ಥಗೊಂಡಿದ್ದ. ಕಾಳಿಗೆ ಹಾಕುವ ಮಾತ್ರೆಗಳನ್ನು ತಿಂದಿದ್ದೇನೆ ಎಂದು ತಿಳಿಸಿದ. ತಕ್ಷಣವೇ ಚಿಕ್ಕಬಳ್ಳಾಪುರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಕೊಡಿಸಿದೆವು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ದಾಖಲಿಸಿದೆವು ಎಂದು ಶ್ರವಣ್ ತಂದೆ ರಾಜಣ್ಣ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ: ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿ ಲಹರಿ (20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ ಸೇವಿಸಿದ್ದ ಅವರನ್ನು ಬೆಂಗಳೂರಿನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಲಹರಿ ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ಅವರ ಪುತ್ರಿ. ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನಲ್ಲಿ ಸೋಮವಾರ ಅಂತ್ಯ ಸಂಸ್ಕಾರ ನೆರವೇರಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು