ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ಈ ಹಿಂದಿನಿಂದಲೂ ನಾನು ಈ ಮಾತು ಹೇಳುತ್ತಿದ್ದೇನೆ. ಈಗಲೂ ಹೇಳುವೆ ಎಂದು ಮಂಡ್ಯ ಸಂಸದೆ ಸುಮಲತಾ ತಿಳಿಸಿದರು.

ನವದೆಹಲಿಯಿಂದ ಬಂದ ಅವರು ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಎನ್ನುವ ಮಾತು ಮೊದಲಿಗೆ ಬಂದಿತು. ನಂತರ ಚಿಕ್ಕಬಳ್ಳಾಪುರ ಕ್ಷೇತ್ರದ ವಿಚಾರ ಬಂದಿತು. ಚಿಕ್ಕಬಳ್ಳಾಪುರಕ್ಕೆ ನಾನು ಏಕೆ ಹೋಗಲಿ ಎಂದು ಬಿಜೆಪಿ ವರಿಷ್ಠರಿಗೆ ಹೇಳಿದ್ದೇನೆ ಎಂದರು.

ನನಗೆ ದೊರೆತಿರುವ ಮಾಹಿತಿ ಪ್ರಕಾರ ಮಂಡ್ಯ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಪಕ್ಷದಲ್ಲಿ ನನ್ನ ಬಗ್ಗೆ ಗೌರವ ಇಟ್ಟುಕೊಂಡಿದ್ದಾರೆ. ವರಿಷ್ಠರು ಸಕಾರಾತ್ಮಕವಾಗಿ ಮಾತನಾಡಿದ್ದಾರೆ. ಪಕ್ಷ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೊ ಕಾದು ನೋಡೋಣ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.