ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಿರ ಸರ್ಕಾರಕ್ಕಾಗಿ ಬಿಜೆಪಿಗೆ ಬೆಂಬಲ

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಆಶಾಭಾವನೆ
Last Updated 1 ಡಿಸೆಂಬರ್ 2019, 14:53 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಮೈತ್ರಿ ಸರ್ಕಾರದ ಆಂತರಿಕ ಕಚ್ಚಾಟ ಕಂಡು ಬೇಸತ್ತಿರುವ ರಾಜ್ಯದ ಜನತೆ ಮತ್ತೊಮ್ಮೆ ಮೈತ್ರಿಯ ಗುಂಗಿನಲ್ಲಿರುವ ಕಾಂಗ್ರೆಸ್, ಜೆಡಿಎಸ್‌ಗೆ ಅವಕಾಶ ತಿರಸ್ಕರಿಸಿ, ಸುಭದ್ರ ಹಾಗೂ ಸ್ಥಿರ ಸರ್ಕಾರಕ್ಕಾಗಿ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ’ ಎಂದು ಶಾಸಕ ಗೂಳಿಹಟ್ಟಿ ಶೇಖರ್ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಲಭಿಸಿದ ಜನಾದೇಶವೇ ಪ್ರಸ್ತುತ ಉಪ ಚುನಾವಣೆಯಲ್ಲಿ ಮರುಕಳುಹಿಸಲಿದೆ. ಈ ಮೂಲಕ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಳಿದ ಮೂರೂವರೆ ವರ್ಷ ಸ್ಥಿರ ಸರ್ಕಾರ ನಡೆಸಲಿದ್ದಾರೆ. ಯಾವ ಕಾರಣಕ್ಕೂ ಉಪ ಚುನಾವಣೆಯ ಬಳಿಕ ರಾಜ್ಯದಲ್ಲಿ ಸರ್ಕಾರ ಬದಲಾಗಲ್ಲ. ಸುಮಾರು 13 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಕ್ಷೇತ್ರದಲ್ಲಿ ಹರಿದು ಹಂಚಿಹೋಗಿದ್ದ ಭೋವಿ ಸಮುದಾಯವನ್ನು ಶಾಸಕ ಚಂದ್ರಪ್ಪ ಅವರ ನೇತೃತ್ವದಲ್ಲಿ ಒಗ್ಗೂಡಿಸಿ, ಅವರ ಏಳಿಗೆಗಾಗಿ ಶ್ರಮಿಸಲಾಗುತ್ತಿದೆ. ಭೋವಿ ಸಮುದಾಯದವರ ಮತಗಳನ್ನು ಕ್ರೂಢೀಕರಿಸಿ ಬಿಜೆಪಿ ಬೆಂಬಲ ನೀಡಲಾಗುತ್ತಿದೆ. ಈ ಮೂಲಕ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಸಮುದಾಯದ ಅಳಿಲು ಸೇವೆ ಸಲ್ಲಿಸಲಾಗುತ್ತದೆ’ ಎಂದರು.

‘ಬಿಜೆಪಿ ಸರ್ಕಾರವು ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಯೋಜನೆಗಳು ಹಾಗೂ ಸ್ಥಳೀಯ ಬಿಜೆಪಿ ಅಭ್ಯರ್ಥಿ ಸುಧಾಕರ್ ಅವರ ಜನಪ್ರಿಯತೆಯಿಂದಾಗಿ ಇಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಸುಧಾಕರ್ ಅವರು 40 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದು ಶತಸಿದ್ಧ’ ಎಂದು ಆಶಾಭಾವನೆ ವ್ಯಕ್ತಪಡಿಸಿದರು.

ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮಾತನಾಡಿ, ‘ಕ್ಷೇತ್ರದ ಜನತೆಯಿಂದ ಬಿಜೆಪಿಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಭೋವಿ ಸಮುದಾಯವು ಬಿಜೆಪಿಯೊಂದಿಗೆ ನಿಲ್ಲಲಿದೆ. ಕ್ಷೇತ್ರದಲ್ಲಿರುವ 18 ಸಾವಿರ ಭೋವಿ ಸಮುದಾಯದ ಮತದಾರರೂ ಸುಧಾಕರ್ ಅವರಿಗೆ ನೀಡಲಿದ್ದಾರೆ. ಯಡಿಯೂರಪ್ಪ ಅವರು ಉತ್ತಮ ಆಡಳಿತವನ್ನು ನೀಡುತ್ತಿದ್ದಾರೆ. 15 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಬಿಜೆಪಿ ಎಸ್‌ಸಿ ಮೋರ್ಚಾದ ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಭೋವಿ ಸಮಾಜದ ಜಿಲ್ಲಾ ಘಟಕ ಅಧ್ಯಕ್ಷ ಗಾವಿಗಾನಹಳ್ಳಿ ನಾರಾಯಣಸ್ವಾಮಿ, ಉಪಾಧ್ಯಕ್ಷ ವೈ.ಶಂಕರ್, ಪ್ರಧಾನ ಕಾರ್ಯದರ್ಶಿ ಎ.ಕೃಷ್ಣ, ತಾಲ್ಲೂಕು ಅಧ್ಯಕ್ಷ ಬಿ.ಕೆ.ಮೂರ್ತಿ, ಗುಂತಪನಹಳ್ಳಿ ಸುರೇಶ್, ಹನುಮಂತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT