ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಸಾವು: ಕಲುಷಿತ ನೀರು ಸೇವನೆ ಶಂಕೆ

Published 20 ಆಗಸ್ಟ್ 2023, 5:55 IST
Last Updated 20 ಆಗಸ್ಟ್ 2023, 5:55 IST
ಅಕ್ಷರ ಗಾತ್ರ

ಗೌರಿಬಿದನೂರು: ತಾಲ್ಲೂಕಿನ ಕಲ್ಲಿನಾಯಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹೊಸಹಳ್ಳಿ ಗ್ರಾಮದ ಭಾವನಾ (10) ಶನಿವಾರ ಮೃತಪಟ್ಟಿದ್ದು, ಕಲುಷಿತ ನೀರು ಸೇವನೆ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ. 

ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ.  

‘ಬಾಲಕಿಯ ಸಾವಿಗೆ ನೈಜ ಕಾರಣ ದೃಢಪಟ್ಟಿಲ್ಲ. ಪ್ರಯೋಗಾಲಯದ ವರದಿ ಬಂದ ಬಳಿಕ ನಿಖರ ಕಾರಣ ತಿಳಿಯಬಹುದು. ಬಾಲಕಿ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದಳು ಎಂದು ಪೋಷಕರೇ ತಿಳಿಸಿದ್ದಾರೆ’ ಎಂದು ತಹಶೀಲ್ದಾರ್ ಮಹೇಶ್ ಎಸ್. ಪತ್ರಿ ತಿಳಿಸಿದ್ದಾರೆ.

ಗ್ರಾಮದ ಶುದ್ಧ ಕುಡಿಯುವ ‌ನೀರಿನ ಘಟಕ ದುರಸ್ಥಿಯಾಗದ ಕಾರಣ ನೇರವಾಗಿ ಕೊಳವೆಬಾವಿ ನೀರು ಪೂರೈಸಲಾಗುತ್ತಿದೆ. ಬಾಲಕಿ ಸಾವಿಗೆ ಕಲುಷಿತ ನೀರು ಸೇವನೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಎಲ್ಲೆಂದರಲ್ಲಿ ಗಲೀಜು ಇದೆ. ಇದರಿಂದ ಗ್ರಾಮದಲ್ಲಿ ಡೆಂಗಿ ರೋಗ ಹರಡಿದೆ. ಬಾಲಕಿ ಸಾವಿಗೆ ಡೆಂಗಿ ಕೂಡ ಕಾರಣ ಇರಬಹುದು ಎಂದು ಗ್ರಾಮಸ್ಥರು ಶಂಕಿಸಿದ್ದಾರೆ.

ಚಿಕ್ಕಹೊಸಹಳ್ಳಿಗೆ ತಹಶೀಲ್ದಾರ್ ಮಹೇಶ್ ಎಸ್. ಪತ್ರಿ, ತಾ.ಪಂ ಇಒ ಆರ್.ಹರೀಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಆಂಜನೇಯ ಮೂರ್ತಿ, ಸಿಡಿಪಿಒ ರವಿ, ಪಿಡಿಒ ಎಸ್.ಪಿ.ವಿಜಯಕುಮಾರ್ ಹಾಗೂ ಅಧಿಕಾರಿಗಳು ಶನಿವಾರ ಭೇಟಿ ನೀಡಿ ಗ್ರಾಮದಲ್ಲಿನ ನೀರು ಸರಬರಾಜು ಟ್ಯಾಂಕ್, ಚರಂಡಿ ವ್ಯವಸ್ಥೆ, ನೈರ್ಮಲ್ಯ ಮತ್ತಿತರ ವ್ಯವಸ್ಥೆಗಳನ್ನು ಪರಿಶೀಲಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT