ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಶತಮಾನದ ಸಂತನ ಜನ್ಮದಿನೋತ್ಸವ

Last Updated 13 ಜನವರಿ 2023, 5:36 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ತಾಲ್ಲೂಕಿನ ಮಳ್ಳೂರು ಗ್ರಾಮದ ವಿವೇಕಾನಂದ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಗುರುವಾರ ಸ್ವಾಮಿ ವಿವೇಕಾನಂದ ಜನ್ಮ ದಿನೋತ್ಸವ ಮತ್ತು ಶಾಲಾ-ಕಾಲೇಜು ವಾರ್ಷಿಕೋತ್ಸವ ನಡೆಯಿತು.

ವಿದ್ಯಾಸಂಸ್ಥೆಯ ಅಧ್ಯಕ್ಷ ರಾಮಾಂಜಿನಪ್ಪ ಮಾತನಾಡಿ, ‘ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಶಾಲೆ ಮತ್ತು ಊರಿಗೆ ಕೀರ್ತಿ ತರಬೇಕು’ ಎಂದು ತಿಳಿಸಿದರು.

ಮಾನವೀಯ ಮೌಲ್ಯಗಳ ಜೊತೆಗೆ ಸಮಗ್ರ ಏಕತೆಯ ಚಿಂತನಾ ಸಿದ್ಧಾಂತವನ್ನು ವಿಶ್ವಕ್ಕೆ ಬೋಧಿಸಿ ಯುವಜನತೆಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಸ್ವಾಮಿ ವಿವೇಕಾನಂದರ ಚಿಂತನೆ, ಆದರ್ಶ ಬದುಕು ಇಡೀ ವಿಶ್ವಕ್ಕೆ ದಾರಿದೀಪ ಎಂದು ತಿಳಿಸಿದರು.

ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಕ್ರೀಡಾಕೂಟಗಳಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ.ಆರ್.ಶಿವಣ್ಣ, ಖಜಾಂಚಿ ಎಂ.ಕೆ. ಚಂದ್ರಶೇಖರ್, ನಿರ್ದೇಶಕ ಸಿ.ಎಂ. ದೇವರಾಜ್, ಎಂ.ಆರ್. ಮಂಜುನಾಥ ಬಾಬು, ಕೆ.ಎಂ. ಮುನಿರೆಡ್ಡಿ, ವೈ.ಎಂ.ರಮೇಶ್, ಪ್ರಾಧ್ಯಾಪಕರಾದ ಸಿ.ಎಂ. ಸುರೇಶ್, ರಾಜೇಂದ್ರ ಕುಮಾರ್, ವೆಂಕಟೇಶ್, ಹೇಮಲತಾ, ಪ್ರಸನ್ನ, ಬೋಧಕ ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT