ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹ

ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ
Last Updated 27 ಜೂನ್ 2021, 3:16 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹಿಸಿ ಹಾಗೂ ರೈತ, ಕಾರ್ಮಿಕರ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತ ಸಂಘ (ಪ್ರೊ.ನಂಜುಂಡಸ್ವಾಮಿ ಸ್ಥಾಪಿತ) ಕಾರ್ಯಕರ್ತರು ನಗರದ ಉಪವಿಭಾಗಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟಿಸಿದರು. ಪಾದಯಾತ್ರೆಯಲ್ಲಿ ಬಂದ ಪ್ರತಿಭಟನಕಾರರು ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್ ಅವರಿಗೆ ಮನವಿ ಸಲ್ಲಿಸಿದರು.

ಕೃಷಿ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ವಿದ್ಯುತ್ ಕಾಯ್ದೆಗೆ ತಂದಿರುವ ತಿದ್ದುಪಡಿಗಳನ್ನು ಕೇಂದ್ರ ಸರ್ಕಾರ ತಕ್ಷಣವೇ ರದ್ದುಗೊಳಿಸಬೇಕು. ಈ ಕಾಯ್ದೆಗಳ ತಿದ್ದುಪಡಿಯಿಂದ ರೈತರು, ಕೂಲಿ ಕಾರ್ಮಿಕರು ಬೀದಿಗೆ ಬೀಳಲಿದ್ದಾರೆ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಜಿ.ಹಳ್ಳಿ ಬಿ.ನಾರಾಯಣಸ್ವಾಮಿ ದೂರಿದರು.

ರೈತರ ಕೃಷಿ ಉತ್ಪನ್ನಗಳ ಉತ್ಪಾದನಾ ವೆಚ್ಚ ಗಣನೀಯವಾಗಿ ಹೆಚ್ಚಿದೆ. ಈ ಕಾರಣದಿಂದ ಬೆಳೆಗಳಿಗೆ ವೈಜ್ಞಾನಿಕ ಬೆಲೆಗಳನ್ನು ನಿಗದಿಗೊಳಿಸುವ ಸ್ವಾಮಿನಾಥವ್ ಅವರ ವರದಿಯನ್ನು ಜಾರಿಗೊಳಿಸಬೇಕು ಎಂದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಬಸವರಾಜು, ಗೌರವಾಧ್ಯಕ್ಷ ರಾಜಣ್ಣ, ಪ್ರಧಾನ ಕಾರ್ಯದರ್ಶಿ ಸಿ.ಎನ್.ಅಶ್ವತ್ಥನಾರಾಯಣಗೌಡ, ಚಿಕ್ಕಬಳ್ಳಾಪುರ ತಾಲ್ಲೂಕು ಘಟಕದ ಅಧ್ಯಕ್ಷ ಗಂಗಾಧರ್, ಕಾರ್ಯದರ್ಶಿ ನಾರಾಯಣ ಸ್ವಾಮಿ, ‌‌ಬಾಗೇಪಲ್ಲಿ ಶ್ರೀನಿವಾಸಲು, ಜಾಕೀರ್ ಅಹಮ್ಮದ್, ಎಚ್.ಎನ್.ಸುಬ್ಬಾರೆಡ್ಡಿ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT