ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ಸರ್ಕಾರದ ಯೋಜನೆಯ ಸದ್ಬಳಕೆಗೆ ಕಿವಿಮಾತು
Last Updated 25 ಜೂನ್ 2021, 3:50 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಪದವಿ ವಿದ್ಯಾರ್ಥಿಗಳ ಆನ್‌ಲೈನ್ ತರಗತಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರ ಉಚಿತವಾಗಿ ಟ್ಯಾಬ್ ವಿತರಿಸುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ವಿ. ಮುನಿಯಪ್ಪ ಹೇಳಿದರು.

ನಗರದ ಪ್ರಥಮದರ್ಜೆ ಕಾಲೇಜಿನಲ್ಲಿ ಗುರುವಾರ ಆಯೋಜಿಸಲಾಗಿದ್ದ ಪ್ರಥಮ ವರ್ಷದ ಪದವಿ ವಿದ್ಯಾಥಿಗಳಿಗೆ ಟ್ಯಾಬ್ ವಿತರಣೆ ಹಾಗೂ ಸ್ಮಾರ್ಟ್ ಕ್ಲಾಸ್ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೋವಿಡ್ ಇರುವ ಕಾರಣ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಉಚಿತ ಟ್ಯಾಬ್ ವಿತರಿಸುತ್ತಿದೆ. ವಿದ್ಯಾರ್ಥಿಗಳು ಮನೆಯಲ್ಲಿಯೇ ಇದ್ದು ಆನ್‌ಲೈನ್ ತರಗತಿಯ ಶಿಕ್ಷಣ ಪಡೆದುಕೊಳ್ಳುವ ಮೂಲಕ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಪದವಿ ಪ್ರಥಮ ವರ್ಷದ 131 ಮಂದಿ ವಿದ್ಯಾರ್ಥಿಗಳ ಪೈಕಿ 10 ಮಂದಿಗೆ ಮಾತ್ರ ಸಾಂಕೇತಿಕವಾಗಿ ಟ್ಯಾಬ್ ವಿತರಿಸಲಾಗಿದ್ದು, ಉಳಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿಯೇ ಟ್ಯಾಬ್ ವಿತರಿಸಲಾಗುವುದು ಎಂದು ತಿಳಿಸಿದರು.

ಪ್ರಾಂಶುಪಾಲ ಡಾ.ಜಿ. ಮುರಳಿ ಆನಂದ್, ನಗರಸಭೆ ಪೌರಾಯಕ್ತ ಶ್ರೀನಿವಾಸ್, ನಗರ ಠಾಣೆ ಪಿಎಸ್‌ಐ ಸತೀಶ್, ಪ್ರಾಧ್ಯಾಪಕರಾದ ಡಾ.ವಿ. ವೆಂಕಟೇಶ್, ಜಿ.ಕೆ. ರಮೇಶ್, ಕೆ. ಉಮೇಶ್‌ರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT