ಸೋಮವಾರ, ಏಪ್ರಿಲ್ 12, 2021
23 °C

ಬಾಗೇಪಲ್ಲಿ: ಗೊರ್ತಪಲ್ಲಿಯಲ್ಲಿ 20ರಂದು ತಹಶೀಲ್ದಾರ್ ಗ್ರಾಮ ವಾಸ್ತವ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗೇಪಲ್ಲಿ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಜಿಲ್ಲಾಧಿಕಾರಿಗಳ ನಡೆ ಗ್ರಾಮ ಕಡೆ’ ಯೋಜನೆಯಂತೆ ಮಾ.20ರ ಶನಿವಾರದಂದು ತಾಲ್ಲೂಕಿನ ಗೊರ್ತಪಲ್ಲಿ ಗ್ರಾಮದಲ್ಲಿ ವಾಸ್ತವ್ಯದಲ್ಲಿ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

‘ತಾಲ್ಲೂಕಿನ ಗೊರ್ತಪಲ್ಲಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ 10ರಿಂದ 5ರವರೆಗೂ ವಾಸ್ತವ್ಯ ಇರಲಾಗುವುದು. ಪಂಚಾಯಿತಿ ವ್ಯಾಪ್ತಿಯಲ್ಲಿನ ಜಮೀನುಗಳ ಪಹಣಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಲಾಗುವುದು. ವ್ಯಾಜ್ಯಗಳನ್ನು ಬಗೆಹರಿಸಲಾಗುವುದು. ಪಿಂಚಣಿ ಸೌಲಭ್ಯ ನೀಡುವುದು. ಸ್ಮಶಾನಕ್ಕೆ ಜಾಗ ನಿಗದಿಪಡಿಸಲಾಗುವುದು. ಆಶ್ರಯಯೋಜನೆಗಳಿಗೆ ಜಾಗ ನೀಡುವುದು. ಸರ್ಕಾರಿ ಜಮೀನು ಅಕ್ರಮವಾಗಿ ಒತ್ತುವರಿಯನ್ನು ತೆರವುಗೊಳಿಸಲಾಗುವುದು’ ಎಂದು ತಹಶೀಲ್ದಾರ್ ಡಿ.ಎ.ದಿವಾಕರ್ ತಿಳಿಸಿದ್ದಾರೆ.

ಸರ್ಕಾರಗಳಿಂದ ಬರುವ ಸೌಲಭ್ಯಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು. ಮತದಾರರಪಟ್ಟಿ, ಪರಿಷ್ಕರಣೆ, ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಕಲಿಕಾಕ್ರಮ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು