ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಿಂದ ಬಾಗೇಪಲ್ಲಿ ತಾಲ್ಲೂಕಿನ ಆಂಧ್ರಪ್ರದೇಶದ ಗಡಿವರೆಗಿನ ರಾಷ್ಟ್ರೀಯ ಹೆದ್ದಾರಿ 44 ಅನ್ನು ದಶಪಥ ರಸ್ತೆಯನ್ನಾಗಿ ₹2,500 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ತಿಳಿಸಿದರು.

ಜಿಲ್ಲಾ ಪಂಚಾಯಿತಿಯ ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಗುರುವಾರ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’ (ದಿಶಾ) ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ, ಸುದ್ದಿಗಾರರೊಂದಿಗೆ ಮಾತನಾಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 44 ಅನ್ನು ದಶಪಥ ರಸ್ತೆಯನ್ನಾಗಿ ಅಭಿವೃದ್ಧಿ ಸಂಬಂಧ ಪ್ರಕ್ರಿಯೆ ಆರಂಭವಾಗಿದೆ. ಈಗಿರುವ ರಸ್ತೆ ಜೊತೆಗೆ 6 ಪಥದ ರಸ್ತೆ ನಿರ್ಮಿಸಿ, ದಶಪಥ ರಸ್ತೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಭೂಸ್ವಾಧೀನ ಪ್ರಕ್ರಿಯೆಯೂ ಪೂರ್ಣಗೊಂಡಿದೆ. ಮುಂದಿನ ಮೂರು ತಿಂಗಳಿನಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಕೃಷಿ ಬೆಳೆಗಳಿಗೆ ಕೇಂದ್ರ ಸರ್ಕಾರ ದುಪ್ಪಟ್ಟು ಬೆಂಬಲ ಬೆಲೆ ನಿಗದಿಪಡಿಸಿದೆ. ಜಿಲ್ಲೆಯಲ್ಲಿ ರಾಗಿ ಬೆಳೆಯುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಪ್ರತಿ ಕ್ವಿಂಟಲ್ ರಾಗಿಗೆ ₹4,886 ದರ ನಿಗದಿಪಡಿಸಲಾಗಿದೆ. ಈ ದರವು ಮಾರುಕಟ್ಟೆ ದರಕ್ಕಿಂತಲೂ ಹೆಚ್ಚು. ಜಿಲ್ಲೆಯಲ್ಲಿ ರಾಗಿ ಖರೀದಿ ಪ್ರಕ್ರಿಯೆ ಚಾಲನೆಯಲ್ಲಿದೆ. ಜಿಲ್ಲೆ ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಹಗಲು ಹೊತ್ತಿನಲ್ಲೂ ವಿದ್ಯುತ್: ಕುಸುಮ್ ಸಿ ಯೋಜನೆಯಡಿ ಜಿಲ್ಲೆಯಲ್ಲಿ 300 ಮೆಗಾ ವ್ಯಾಟ್ ಸೌರ ವಿದ್ಯುತ್ ಉತ್ಪಾದನೆ ಮಾಡಿ, ಸ್ಥಳೀಯ ಅಭಿವೃದ್ಧಿ ಕಾರ್ಯಗಳಿಗೆ ಕಡಿಮೆ ಬೆಲೆಗೆ ನೀಡಲಾಗುತ್ತದೆ. ಈ ಯೋಜನೆಯಡಿ ರೈತರಿಗೆ ಉಚಿತವಾಗಿ ಹಗಲು ಹೊತ್ತಿನಲ್ಲೂ ಸಾಕಷ್ಟು ತೃಪ್ತಿದಾಯಕವಾಗಿ ವಿದ್ಯುತ್ ನೀಡುವ ಯೋಜನೆ ಇದು. ಇಂತಹ ಯೋಜನೆಗಳು 2047ಕ್ಕೆ ಭಾರತವನ್ನು ವಿಶ್ವದ ಸಂಪದ್ಭರಿತ ದೇಶವಾಗಿ ಹೊರಹೊಮ್ಮಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಆದಿ ಆದರ್ಶ ಗ್ರಾಮ ಯೋಜನೆಯಡಿ ಈ ಹಿಂದೆ 18 ಗ್ರಾಮಗಳನ್ನು ದತ್ತು ತೆಗೆದುಕೊಳ್ಳಲಾಗಿತ್ತು. ಈ ಸಾಲಿನಲ್ಲಿ 30 ಗ್ರಾಮಗಳನ್ನು ತೆಗೆದುಕೊಂಡು ಆ ಗ್ರಾಮಗಳ ಸಂಪೂರ್ಣ ಅಭಿವೃದ್ಧಿಗಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಈ ಯೋಜನೆಗೆ ಅನುದಾನದ ಮಿತಿ ಇರುವುದಿಲ್ಲ. ಸದರಿ ಗ್ರಾಮದ ಗ್ರಾಮ ಸಭೆಯ ಬೇಡಿಕೆ ಅನ್ವಯ ಗ್ರಾಮದ ಸಂಪೂರ್ಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

2 ತಿಂಗಳಲ್ಲಿ ಜಿಲ್ಲಾ ಆಯುಷ್ ಆಸ್ಪತ್ರೆ: ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಆಯುಷ್ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯು ಅಂತಿಮ ಹಂತದಲ್ಲಿದೆ. ಮುಂದಿನ 2 ತಿಂಗಳಿನಲ್ಲಿ ಲೋಕಾರ್ಪಣೆಯಾಗಲಿದೆ. ಅಲ್ಲದೆ, ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ₹65 ಲಕ್ಷ ವೆಚ್ಚದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಾಣವಾಗಲಿದೆ ಎಂದರು.

ಜಲಜೀವನ್ ಮಿಷನ್ ಯೋಜನೆಯಡಿ 800ಕ್ಕೂ ಅಧಿಕ ಗ್ರಾಮಗಳಲ್ಲಿ ಕಾಮಗಾರಿ ಆರಂಭವಾಗಿದೆ. 25 ಗ್ರಾಮಗಳಲ್ಲಿ ಪರಿಶೀಲನೆ ನಡೆದಿದ್ದು, 22 ಕಡೆ ಕಾಮಗಾರಿ ಪೂರ್ಣಗೊಂಡಿದೆ. ಒಟ್ಟಾರೆ 983 ಓವರ್ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದ್ದು, 310 ಕಡೆ ಕಾಮಗಾರಿ ಪ್ರಗತಿಯಲ್ಲಿದೆ. ಕೆಲವೆಡೆ ಅನುದಾನದ ಸಮಸ್ಯೆಯಿಂದ ಟೆಂಡರ್ ವಿಳಂಬವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ಎಲ್ಲ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಹಾಗೂ ಕಾಮಗಾರಿ ವಿಳಂಬವಾದರೆ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಬೇಕು. ಎಲ್ಲ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಎಚ್.ಎನ್ ವ್ಯಾಲಿ ಹಾಗೂ ಕೆ.ಸಿ. ವ್ಯಾಲಿ ನೀರಿನ ಮತ್ತಷ್ಟು ಶುದ್ಧೀಕರಣಕ್ಕಾಗಿ 3ನೇ ಹಂತದಲ್ಲಿ ಸಂಸ್ಕರಣೆ ಮಾಡುವ ಯೋಜನೆ ಜಾರಿಗೊಳಿಸಬೇಕು. 2ನೇ ಹಂತದಲ್ಲಿ ಸಂಸ್ಕರಣೆಯಾಗುವ ನೀರು ಕುಡಿಯಲು ಯೋಗ್ಯವಲ್ಲ ಎಂದು ವಿಜ್ಞಾನಿಗಳೇ ಹೇಳಿದ್ದಾರೆ. ಯಾವುದೇ ದೇಶದಲ್ಲಿ 2ನೇ ಹಂತದಲ್ಲಿ ಸಂಸ್ಕರಣೆಯಾಗುವ ನೀರು ಕುಡಿಯಲು ಅಥವಾ ಕೃಷಿಗೆ ಬಳಸುವುದಿಲ್ಲ ಎಂದರು.

ಜಿಲ್ಲೆಯಲ್ಲಿ ಕೇಂದ್ರ ಸಹಭಾಗಿತ್ವದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಜಿಲ್ಲಾಡಳಿತಕ್ಕೆ ತಿಳಿಸಲಾಗಿದೆ. ಗೌರಿಬಿದನೂರು ತಾಲ್ಲೂಕಿನಲ್ಲಿ ಒಂದು ಏಕಲವ್ಯ ಶಾಲೆ ತೆರೆಯಲು ಚಿಂತಿಸಲಾಗಿದೆ. ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಜಿಲ್ಲೆಯ 4,886 ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡಲಾಗಿದೆ. 2.36 ಲಕ್ಷ ಕಾರ್ಮಿಕರನ್ನು ಇ-ಶ್ರಮ್ ಯೋಜನೆಯಡಿ ಹಾಗೂ 70 ಸಾವಿರ ಕಾರ್ಮಿಕರನ್ನು ಅಸಂಘಟಿತ ವಲಯದಲ್ಲಿ ನೋಂದಾಯಿಸಿ ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ದಿಶಾ ಸಮಿತಿ ಸದಸ್ಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.