ಆ.11 ರಂದು ಪ್ರತಿಭಾ ಪುರಸ್ಕಾರ

7

ಆ.11 ರಂದು ಪ್ರತಿಭಾ ಪುರಸ್ಕಾರ

Published:
Updated:

ಚಿಕ್ಕಬಳ್ಳಾಪುರ: ‘ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗರದ ಕೆಇಬಿ ನೌಕರರ ಸಭಾಂಗಣದಲ್ಲಿ ಆ.11 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಬಹುಜನ ವಿದ್ಯಾರ್ಥಿ ಸಂಘದ (ಬಿವಿಎಸ್‌) ತಾಲ್ಲೂಕು ಘಟಕದ ಅಧ್ಯಕ್ಷ ಮುನಿರಾಜು ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕಾನಾಥ್, ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಪ್ರೊ.ಹರಿರಾಮ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ’ ಎಂದು ಹೇಳಿದರು.

‘2002ರಲ್ಲಿ ಸ್ಥಾಪನೆಯಾದ ಬಿವಿಎಸ್ ಸಂಘಟನೆ ನಿರಂತರವಾಗಿ ವಿದ್ಯಾರ್ಥಿಗಳ ಪರ ಹೋರಾಟಗಳನ್ನು ನಡೆಸುತ್ತಿದೆ. ಅಂಬೇಡ್ಕರ್ ಆದರ್ಶ, ಸಿದ್ದಾಂತಗಳು ಹಾಗೂ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಂಘಟನೆ ಸಾಗುತ್ತಿದೆ. 16 ವರ್ಷಗಳಿಂದ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿಕೊಂಡು ಬರಲಾಗುತ್ತಿದೆ’ ಎಂದರು. ಸಂಘದ ಸದಸ್ಯರಾದ ಟಿ.ಜಿ.ನಾರಾಯಣಸ್ವಾಮಿ, ಬಾಲಕೃಷ್ಣ, ಪ್ರಶಾಂತ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !