ಮಂಗಳವಾರ, ಜನವರಿ 31, 2023
19 °C

ತೆರಿಗೆ ವಸೂಲಿ ಆಂದೋಲನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ: ನಗರದ ವಿವಿಧ ಬಡಾವಣೆಗಳಿಗೆ ಗುರುವಾರ ನಗರಸಭೆ ಅಧಿಕಾರಿಗಳೊಂದಿಗೆ ತೆರಳಿದ ನಗರಸಭೆ ಪೌರಾಯುಕ್ತ ಶ್ರೀಕಾಂತ್ ಅವರು ತೆರಿಗೆ ವಸೂಲಿ ಮಾಡಿದರು. 

ಈ ವೇಳೆ ಮಾತನಾಡಿದ ಅವರು, ‘ನಗರಸಭೆಗೆ ಪಾವತಿಸಬೇಕಾದ ಆಸ್ತಿ, ನೀರಿನ ತೆರಿಗೆ, ಒಳಚರಂಡಿ ಶುಲ್ಕವನ್ನು ಎಲ್ಲರೂ ಕಡ್ಡಾಯವಾಗಿ ಪಾವತಿಸಲೇಬೇಕು.  ಪ್ರತಿ ಮನೆ ಮತ್ತು ಆಸ್ತಿದಾರರನ್ನು ಖುದ್ದಾಗಿ ಭೇಟಿ ಮಾಡಿ, ತೆರಿಗೆ ಬಾಕಿ ಉಳಿಸಿಕೊಂಡವರಿಂದ ವಿಷಯ ಮನವರಿಕೆ ಮಾಡಿ, ತೆರಿಗೆ ವಸೂಲಿ ಮಾಡಲಾಗುತ್ತಿದೆ’ ಎಂದು ತಿಳಿಸಿದರು. 

ವ್ಯಾಪಾರಿ ಮತ್ತು ಅಂಗಡಿಗಳ ಮಾಲೀಕರು ಟ್ರೇಡ್ ಲೈಸೆನ್ಸ್ ಹೊಂದಿರಬೇಕು. ಔಷಧಿ ಅಂಗಡಿಗಳು ಪುರಸಭೆಯಿಂದ ಪರವಾನಗಿ ಪಡೆಯವುದರಿಂದ ವಿನಾಯಿತಿ ಕೋರುತ್ತಿದ್ದಾರೆ. ಪುರಸಭೆ ಕಾಯ್ದೆಯ ಮಾರ್ಗಸೂಚಿಯನ್ನು ಪಾಲಿಸಲಾಗುತ್ತಿದೆ. ಪ್ರತಿಯೊಂದು ವಾರ್ಡುಗಳಲ್ಲೂ ನೀರು ಸರಬರಾಜು ಸಮರ್ಪಕವಾಗಿದೆ. ಹಾಗಾಗಿ ನೀರಿನ ತೆರಿಗೆಯನ್ನೂ ಕಡ್ಡಾಯವಾಗಿ ಪಾವತಿಸಬೇಕು. ನಗರದ ಸರ್ವತೋಮುಖ ಅಭಿವೃದ್ಧಿಗೆ ತೆರಿಗೆದಾರರು ನಿಗದಿತ ಸಮಯದಲ್ಲಿ ತೆರಿಗೆ ಪಾವತಿಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.