ಗೌರಿಬಿದನೂರು: ಜೂನ್ ತಿಂಗಳು ಬಂತು ಎಂದರೆ ಎಲ್ಲಾ ಕಡೆ ಮಕ್ಕಳಿಗೆ ಶಾಲೆಗಳು ಪ್ರಾರಂಭವಾಗಿ ಶೈಕ್ಷಣಿಕ ಚಟುವಟಿಕೆಗಳು ಗರಿಗೆದರುತ್ತವೆ. ಆದರೆ ತಾಲ್ಲೂಕಿನ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಮಾತ್ರ ನೀಗಿಲ್ಲ. ಕೊರತೆಗಳ ನಡುವೆಯೇ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಪಾಠಗಳು ಆರಂಭಗೊಳ್ಳುವಂತಾಗಿದೆ.

ಸರ್ಕಾರಿ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಲ್ಲಿ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರು, ಕ್ರಾಫ್ಟ್ ಶಿಕ್ಷಕರು, ಸಹ-ಶಿಕ್ಷಕರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು ಸೇರಿದಂತೆ ವರ್ಷದಿಂದ ವರ್ಷಕ್ಕೆ ವಿಷಯವಾರು ಶಿಕ್ಷಕರ ಕೊರತೆಯೇ ಶಾಲೆಗಳಲ್ಲಿ ಪ್ರಮುಖ ಸಮಸ್ಯೆಯಾಗಿ ಕಾಡುತ್ತಿದೆ.

ಇದರಿಂದಾಗಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿರುವುದರ ಜೊತೆಗೆ, ಎಸ್ಎಸ್ಎಲ್ಸಿ ಫಲಿತಾಂಶದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂದು ಪೋಷಕರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ.

ಗೌರಿಬಿದನೂರು ತಾಲ್ಲೂಕಿನಲ್ಲಿ ಒಟ್ಟು 314 ಸರ್ಕಾರಿ ಶಾಲೆಗಳಿವೆ. 268 ಪ್ರಾಥಮಿಕ ಶಾಲೆ, 23 ಪ್ರೌಢಶಾಲೆ, 5 ಅನುದಾನಿತ ಪ್ರಾಥಮಿಕ ಶಾಲೆ, 18 ಅನುದಾನಿತ ಪ್ರೌಢ ಶಾಲೆಗಳಿವೆ. ಸರ್ಕಾರದ ಆದೇಶದಂತೆ ಒಟ್ಟು 984 ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳು ಮಂಜೂರಾಗಿವೆ. ಆದರೆ ಪ್ರಸಕ್ತ ಸಾಲಿನಲ್ಲಿ 784 ಹುದ್ದೆಗಳು ಮಾತ್ರ ಭರ್ತಿಯಾಗಿದ್ದು, 190 ಹುದ್ದೆಗಳು ಖಾಲಿಯಿವೆ.

ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ತಾಲ್ಲೂಕಿನ ಮಕ್ಕಳಿಗೆ ಶೈಕ್ಷಣಿಕವಾಗಿ ಶಕ್ತಿ ತುಂಬಬೇಕಾದರೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ಪ್ರಥಮ ಆದ್ಯತೆಯ ಮೇರೆಗೆ ನೀಗಿಸಬೇಕು. ಶಾಸಕರು, ಸಚಿವರು, ಅಧಿಕಾರಿಗಳು ಕೂಡಲೇ ತುರ್ತು ಗಮನವಹಿಸುವ ಮೂಲಕ 2025-26ನೇ ಶೈಕ್ಷಣಿಕ ವರ್ಷದಲ್ಲೇ ಅಗತ್ಯ ಇರುವ ಶಿಕ್ಷಕರ ನೇಮಕಾತಿ ಮಾಡಲು ಕ್ರಮ ವಹಿಸಬೇಕು ಎಂದು ಪೋಷಕರು ಮತ್ತು ಶಿಕ್ಷಣ ಪ್ರೇಮಿಗಳು ಆಗ್ರಹಿಸುತ್ತಿದ್ದಾರೆ.

ತಾಲ್ಲೂಕಿನ ಹಲವು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾಯಂ ಶಿಕ್ಷಕರು ಇಲ್ಲದೆ ಅಕ್ಕ ಪಕ್ಕದ ಗ್ರಾಮಗಳ ಶಾಲೆಯ ಶಿಕ್ಷಕರಿಗೆ ಹಾಗೂ ಅತಿಥಿ ಶಿಕ್ಷಕರಿಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಆದರೆ ಅತಿಥಿ ಶಿಕ್ಷಕರ ಅನುಭವದ ಕೊರತೆ ವಿದ್ಯಾರ್ಥಿಗಳಿಗೆ ಕಾಡುತ್ತಿದೆ, ಕೆಲವು ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದರೆ ಇನ್ನು ಕೆಲವು ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಶಾಲೆಗಳಲ್ಲಿ ಸಮತೋಲನ ಕಾಪಾಡಲು ಸಾಧ್ಯವಾಗದೆ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತಿದೆ.

ಸರ್ಕಾರ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ, ಬಾಳೆಹಣ್ಣು, ಸಮವಸ್ತ್ರ, ಪಠ್ಯಪುಸ್ತಕ, ವಿದ್ಯಾರ್ಥಿವೇತನ ಮುಂತಾದ ಸೌಲಭ್ಯಗಳನ್ನು ಒದಗಿಸುತ್ತಿದೆ. ಇದರಿಂದ ಕೆಲವು ಶಿಕ್ಷಕರು ಸಹ ಅನಿವಾರ್ಯವಾಗಿ ಶಿಕ್ಷಣೇತರ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಾಗಿದೆ. ಜೊತೆಗೆ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವುದರಿಂದ ವಿದ್ಯಾರ್ಥಿಗಳು ಮೂಲಭೂತವಾಗಿ ಸಿಗಬೇಕಾದ ಶಿಕ್ಷಣದಿಂದಲೇ ವಂಚಿತರಾಗುತ್ತಿದ್ದಾರೇನೋ ಎನ್ನುವ ಅನುಮಾನ ಪೋಷಕರಲ್ಲಿ ಕಾಡುತ್ತಿದೆ.

ಶಾಲೆಗಳಲ್ಲಿ ಶಿಕ್ಷಕರು ತಮ್ಮ ಪಾಡಿಗೆ ತಾವು ಕೆಲಸ ಮಾಡುತ್ತಾ ಹೋಗುತ್ತಿದ್ದಾರೆ. ಇದರಿಂದ ಹೇಳಿಕೊಳ್ಳುವಂತಹ ಫಲಿತಾಂಶ ಬರುತ್ತಿಲ್ಲ. ಇದಕ್ಕೆ ಸಂಘಟಿತವಾದ ಮತ್ತು ಯೋಜಿತವಾದ ಕ್ರಮಗಳು ಅಗತ್ಯ. ಇದನ್ನು ಮಾಡಲು ಶಿಕ್ಷಕರು ಮತ್ತು ಅಧಿಕಾರಿಗಳು ಮುಂದಾಗಿ ಒಟ್ಟಾಗಿ ಕೆಲಸ ಮಾಡಿದರೆ ಮುಂದಿನ ಪೀಳಿಗೆಯು ಶೈಕ್ಷಣಿಕ ಬದಲಾವಣೆ ಸಾಧ್ಯ ಎನ್ನುವುದು ಪೋಷಕರ ಅಭಿಪ್ರಾಯ.

ಸಮಾಜದ ಪ್ರತಿಯೊಬ್ಬರೂ ಶಿಕ್ಷಣ ಇಲಾಖೆಯಲ್ಲಿ ಶಾಶ್ವತ ಬದಲಾವಣೆ ತರಲು ಪ್ರಯತ್ನಿಸಬೇಕು. ಸರ್ಕಾರಿ ಶಾಲೆಯ ಶಿಕ್ಷಕರಿಗೆ ಸಾಮರ್ಥ್ಯವಿರುವುದರಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾಸು ಮಾಡಿ ಶಿಕ್ಷಕ ವೃತ್ತಿಗೆ ಆಯ್ಕೆಯಾಗಿರುತ್ತಾರೆ. ಆದರೆ ಕೆಲ ಶಿಕ್ಷಕರಲ್ಲಿ ಇಚ್ಛಾಶಕ್ತಿಯ ಕೊರತೆ ಇರುತ್ತದೆ. ಇದನ್ನು ಹೋಗಲಾಡಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಂತೆ ಪ್ರೆರೇಪಿಸಬೇಕು. ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಬೇಕಾದರೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವುದು ಸರ್ಕಾರಗಳ ಪ್ರಥಮ ಆದ್ಯತೆಯಾಗಲಿ ಎನ್ನುವುದು ಪೋಷಕರ ಅಭಿಲಾಷೆ.

ಸರ್ಕಾರ ಶಾಲಾ ಶಿಕ್ಷಕರನ್ನು ನೇಮಕ ಮಾಡಲು ಆದೇಶ ಹೊರಡಿಸಿದೆ. ಶಾಲಾ ಪ್ರಾರಂಭದಲ್ಲೇ ಶಿಕ್ಷಕರನ್ನು ನೇಮಕ ಮಾಡಿ ಪಾಠ ಪ್ರಾರಂಭಿಸಲಾವುದು
ಕೆ.ವಿ ಶ್ರೀನಿವಾಸ್ಮೂರ್ತಿ ಬಿಇಒ

ಶಾಲೆಗಳಲ್ಲಿ ಆದಷ್ಟು ಬೇಗ ವಿಷಯವಾರು ಶಿಕ್ಷಕರನ್ನು ನೇಮಿಸಿ ಶಿಕ್ಷಕರ ಕೊರತೆ ನೀಗಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ನಿರ್ಮಿಸಬೇಕು
ಜನಾರ್ದನ್ ರೆಡ್ಡಿ ಎಸ್ಡಿಎಂಸಿ ಸಮನ್ವಯ ವೇದಿಕೆ ತಾಲ್ಲೂಕು ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.