ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಗೌರಿಬಿದನೂರು: ‌‌ಶಿಕ್ಷಕರು ಮಕ್ಕಳ ಬದುಕಿನ ನಾಯಕರು

Last Updated 6 ಸೆಪ್ಟೆಂಬರ್ 2021, 8:59 IST
ಅಕ್ಷರ ಗಾತ್ರ

‌ಗೌರಿಬಿದನೂರು: ‌‌‘ಮಕ್ಕಳ ಉಜ್ವಲ ಭವಿಷ್ಯಕ್ಕೆ ಶಿಕ್ಷಕರೇ ದಾರಿದೀಪ. ಶಿಕ್ಷಕರು ಮಕ್ಕಳ ಬದುಕಿನ ನಾಯಕರು’ ಎಂದು ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ತಿಳಿಸಿದರು.

ತಾಲ್ಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ದೇಶದ ಭವಿಷ್ಯವನ್ನು ನಿರ್ಧರಿಸಬಲ್ಲ‌ ಯುವಕರನ್ನು ಸತ್ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ‌ ಮೇಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಅವರ ಪಾತ್ರ ಹಿರಿದಾಗಿದೆ. ಮಕ್ಕಳ ಭವಿಷ್ಯಕ್ಕೆ ಆಸರೆಯಾಗುವ ನಿಟ್ಟಿನಲ್ಲಿ ಶಿಸ್ತು ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕಾಗಿದೆ‌ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಎಚ್. ಜಗದೀಶ್ ಮಾತನಾಡಿ, ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಜತೆಗೆ ವಿದ್ಯಾರ್ಥಿಗಳ‌ ಭವಿಷ್ಯಕ್ಕೆ ಆಸರೆಯಾಗುವ ಶಿಕ್ಷಣ ಹಾಗೂ ನೈಜ ಬದುಕನ್ನು ಕಲಿಸುವ ಜವಾಬ್ದಾರಿಯನ್ನು ಶಿಕ್ಷಕರು ಹೊಂದಿದ್ದಾರೆ ಎಂದು‌ ಹೇಳಿದರು.

ಪದವಿ, ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಬಿಇಒ ಕೆ.ವಿ. ಶ್ರೀನಿವಾಸಮೂರ್ತಿ, ನಗರಸಭೆ ಪೌರಾಯುಕ್ತ ಸತ್ಯನಾರಾಯಣ, ಅಧ್ಯಕ್ಷೆ ಕೆ.ಎಂ. ಗಾಯತ್ರಿ ಬಸವರಾಜ್, ತಾ.ಪಂ ಇಒ ಎನ್. ಮುನಿರಾಜು, ನಿವೃತ್ತ ಡಿಡಿಪಿಐ ಟಿ. ಅಶ್ವತ್ಥರೆಡ್ಡಿ, ಉಪ ತಹಶೀಲ್ದಾರ್ ಲಕ್ಷ್ಮಿದೇವಮ್ಮ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಧುಸೂದನ ರೆಡ್ಡಿ, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT