18 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

7
ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳ ಪ್ರದಾನ

18 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

Published:
Updated:

ಚಿಕ್ಕಬಳ್ಳಾಪುರ: ಜಿಲ್ಲೆಯ 18 ಶಿಕ್ಷಕರು ಈ ಬಾರಿ ಸಾರ್ವಜನಿಕ ಶಿಕ್ಷಣ ಇಲಾಖೆಯ 2018-19ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ ವಿಭಾಗಗಳು ಹಾಗೂ ಪ್ರೌಢ ಶಾಲೆ ವಿಭಾಗದಲ್ಲಿ ತಾಲ್ಲೂಕಿಗೆ ಒಬ್ಬರಂತೆ ತಲಾ ಆರು ಶಿಕ್ಷಕರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

‘ತಾಲ್ಲೂಕಿನ ಪೆರೇಸಂದ್ರ ಕ್ರಾಸ್‌ನಲ್ಲಿರುವ ನಂಜುಂಡೇಶ್ವರ ಸಭಾಂಗಣದಲ್ಲಿ ಬುಧವಾರ (ಸೆ.5) ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆರ್.ಶಿವಣ್ಣ ರೆಡ್ಡಿ ತಿಳಿಸಿದರು.

ಕಿರಿಯ ಪ್ರಾಥಮಿಕ ಶಾಲೆ ವಿಭಾಗ
ಬಾಗೇಪಲ್ಲಿ ತಾಲ್ಲೂಕಿನ ಪೋಲನಾಯಕನಹಳ್ಳಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎ.ಆರ್.ಪಾಪಣ್ಣ, ಚಿಕ್ಕಬಳ್ಳಾಪುರದ ಕೋಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಆರ್.ಪದ್ಮಶ್ರೀ, ಗೌರಿಬಿದನೂರು ತಾಲ್ಲೂಕಿನ ನಂಜಯ್ಯಗಾರಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕ ಟಿ.ಕೆ.ನಾಗೇಶ್, ಚಿಂತಾಮಣಿ ತಾಲ್ಲೂಕಿನ ಕುರಬಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಕೆ.ಎಂ.ಶಿವಪ್ರಸಾದ್, ಗುಡಿಬಂಡೆ ಪಟ್ಟಣದ ಜೆಪಿ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಸುಧಾ ಬೆಸ್ತನಾಗ ಪದ್ಮಾವತಿ ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ಟಿ.ವೆಂಕಟಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸಿ.ವೆಂಕಟರೆಡ್ಡಿ.

ಹಿರಿಯ ಪ್ರಾಥಮಿಕ ಶಾಲೆ ವಿಭಾಗ
ಬಾಗೇಪಲ್ಲಿ ತಾಲ್ಲೂಕಿನ ಪಾತಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಾಗಮಣಿ, ಚಿಕ್ಕಬಳ್ಳಾಪುರದ ದೇವಸ್ಥಾನಹೊಸಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಬಿ.ಸಿ.ಮಂಜುಳಾ, ಚಿಂತಾಮಣಿ ನಗರದ ವೆಂಟಕಗಿರಿಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಕೆ.ಎನ್.ಕಲ್ಯಾಣ್ ಕುಮಾರ್, ಗೌರಿಬಿದನೂರಿನ ಕಡಬರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕ ಜಿ.ಹನುಮಂತರೆಡ್ಡಿ, ಗುಡಿಬಂಡೆ ತಾಲ್ಲೂಕಿನ ಎಲ್ಲೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಆದೆಪ್ಪ, ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎಂ.ಸೀನಪ್ಪ.

ಪ್ರೌಢ ಶಾಲೆ ವಿಭಾಗ
ಬಾಗೇಪಲ್ಲಿ ಸರ್ಕಾರಿ ಉರ್ದು ಪ್ರೌಢ ಶಾಲೆಯ ಸಹ ಶಿಕ್ಷಕಿ ಕೆ.ವಿ.ವಾಣಿಶ್ರೀ, ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಡಿಕಲ್ಲು ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ಎಸ್.ವಿ.ವಿಜಯಕುಮಾರ್, ಚಿಂತಾಮಣಿ ಮಹಾತ್ಮಾ ಗಾಂಧಿ ಬಾಲಕರ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ಪಿ.ಕೃಷ್ಣಮೂರ್ತಿ, ಗೌರಿಬಿದನೂರು ಪಟ್ಟಣದ ಎಸ್‍ಎಸ್‍ಇಎ ಸರ್ಕಾರಿ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ಟಿ.ಬಿ.ಲಕ್ಷ್ಮಣ್, ಗುಡಿಬಂಡೆ ತಾಲ್ಲೂಕಿನ ಚೆಂಡೂರು ಸರ್ಕಾರಿ ಪ್ರೌಡ ಶಾಲೆಯ ಸಹ ಶಿಕ್ಷಕ ಎಚ್.ನಾಗರಾಜ್, ಶಿಡ್ಲಘಟ್ಟ ಪಟ್ಟಣದ ಸರಸ್ವತಿ ಕಾನ್ವೆಂಟ್ ಪ್ರೌಢ ಶಾಲೆಯ ಸಹ ಶಿಕ್ಷಕ ಎನ್.ಶಿವಣ್ಣ ಅವರನ್ನು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !