ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಸಮಸ್ಯೆ: ತರಬೇತಿ ಬಹಿಷ್ಕಾರ

Last Updated 6 ಅಕ್ಟೋಬರ್ 2021, 4:46 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಬೇಕು. ಇಲ್ಲದಿದ್ದರೆ ಕನಿಷ್ಠ ಮೂರು ತರಬೇತಿಗಳನ್ನು ಬಹಿಷ್ಕರಿಸಲಾಗುವುದು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಎ.ನಾರಾಯಣಸ್ವಾಮಿ ತಿಳಿಸಿದರು.

ಇಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಡಿಡಿಪಿಐ ಹಾಗೂ ಡಯಟ್ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದರು.

2017ರಲ್ಲಿ ತಿದ್ದುಪಡಿ ಮಾಡಿರುವ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮದಿಂದ
ಪದವೀಧರ ಶಿಕ್ಷಕರಿಗೆ ಅನ್ಯಾಯವಾಗಿದೆ. ಈ ಬಗ್ಗೆ ಸಮಸ್ಯೆ ಬಗೆಹರಿಸಲು ಶಿಕ್ಷಣ ಇಲಾಖೆಗೆ ಹಲವು ಬಾರಿ ರಾಜ್ಯ ಸಂಘ ಮನವಿ ಮಾಡಿದೆ. ಹೀಗಿದ್ದರೂ ಸಮಸ್ಯೆಗಳಿಗೆ ಪರಿಹಾರ ದೊರೆತಿಲ್ಲ ಎಂದು ಹೇಳಿದರು.

ಸಮಸ್ಯೆಗಳನ್ನು ಬಗೆಹರಿಸುವವರೆಗೂ ಯಾವುದೇ ರೀತಿಯ ತರಬೇತಿಗಳಲ್ಲಿ ಶಿಕ್ಷಕರು ಪಾಲ್ಗೊಳ್ಳುವುದಿಲ್ಲ. ಬಹಿಷ್ಕರಿಸಲಾಗುವುದು ಎಂದು ತಿಳಿಸಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ಅಶೋಕ್ ಕುಮಾರ್, ಸಹ ಕಾರ್ಯದರ್ಶಿ ಸಂಜಿವರಾಯಪ್ಪ, ಕೆ.ಸಿ.ಚಂದ್ರಮ್ಮ , ಸಂಘಟನಾ ಕಾರ್ಯದರ್ಶಿಜಯಮ್ಮ, ರಾಜ್ಯಉಪಾಧ್ಯಕ್ಷ ಕೆ.ವಿ ಚೌಡಪ್ಪ, ಬಾಗೇಪಲ್ಲಿ ಅಧ್ಯಕ್ಷಪಿ.ವೆಂಕಟರವಣಪ್ಪ, ಚಿಕ್ಕಬಳ್ಳಾಪುರ ಅಧ್ಯಕ್ಷ ನಾಗರಾಜಪ್ಪ, ಚಿಂತಾಮಣಿ ಪ್ರಧಾನ ಕಾರ್ಯದರ್ಶಿವಸಂತರೆಡ್ಡಿ, ಚಿಕ್ಕಬಳ್ಳಾಪುರ ಪ್ರಧಾನ ಕಾರ್ಯದರ್ಶಿ ಟಿ.ವಿ ಶ್ರೀನಿವಾಸ್, ಗುಡಿಬಂಡೆ ನೌಕರರ ಸಂಘ ಅಧ್ಯಕ್ಷ ಕೆ.ವಿ ನಾರಾಯಣಸ್ವಾಮಿ, ಖಜಾಂಚಿ ವಿಷ್ಣುವರ್ಧನ್, ನೌಕರರ ಸಂಘದ ಜಂಟಿ ಕಾರ್ಯದರ್ಶಿ ಸುನಿಲ್, ರಾಮಶೇಷಪ್ಪ, ಗೋಪಾಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT