ಭಾನುವಾರ, ಜನವರಿ 17, 2021
22 °C

ಶಿಕ್ಷಕರ ಸಂಘದ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2020-2025ರ ಅವಧಿಗೆ ಪದಾಧಿಕಾರಿಗಳ ಆಯ್ಕೆಗಾಗಿ ಡಿ. 6ರಂದು ಚುನಾವಣೆ ನಡೆಯಲಿದೆ.

ನ. 28ರವರೆಗೆ ಬೆಳಿಗ್ಗೆ 11:30 ರಿಂದ ಸಂಜೆ 4:30 ಗಂಟೆವರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ನಾಮಪತ್ರಗಳ ವಿತರಣೆ ಮಾಡಲಾಗುವುದು ಎಂದು ಚುನಾವಣಾಧಿಕರಿ ಎಚ್.ಜಿ. ಸುರೇಶ್ ತಿಳಿಸಿದ್ದಾರೆ.

ನ. 28ರ ಸಂಜೆ 5ಗಂಟೆವರೆಗೆ ನಾಮಪತ್ರ ಸಲ್ಲಿಸಬಹುದು. ಅದೇ ದಿನ ಸಂಜೆ 6:30ಕ್ಕೆ ನಾಮಪತ್ರಗಳ ಪರಿಶೀಲನೆಯಿದೆ. ನ. 29ರ ಸಂಜೆ 4 ಗಂಟೆವರೆಗೆ ನಾಮಪತ್ರಗಳನ್ನು ವಾಪಸ್ ಪಡೆಯಬಹುದು. ಡಿ. 6ರಂದು ಬೆಳಿಗ್ಗೆ 8:30ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5:30 ರಿಂದ ಮತಗಳ ಎಣಿಕೆ ನಡೆಯಲಿದೆ. ಎಣಿಕೆ ನಂತರ ಫಲಿತಾಂಶ ಪ್ರಕಟವಾಗಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು