ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಸಂಘದ ಸಭೆ

Last Updated 3 ಜನವರಿ 2021, 12:05 IST
ಅಕ್ಷರ ಗಾತ್ರ

ಚಿಂತಾಮಣಿ: ‘ರಾಜ್ಯದ ಎಲ್ಲ ಜಿಲ್ಲೆಗಳ ಗ್ರಾಮೀಣ ಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 1.51 ಲಕ್ಷ ಶಿಕ್ಷಕರು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಲ್ಲಿ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ. ಬರಲಿರುವ ಮಾರ್ಚಿ 31 ರ ಒಳಗೆ ಸಂಘಕ್ಕೆ ಸರ್ಕಾರದ ಮಾನ್ಯತೆ ಸಿಗಲಿದೆ’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ನಾರಾಯಣಸ್ವಾಮಿ ತಿಳಿಸಿದರು.

ನಗರದ ಸರ್ಕಾರಿ ನೌಕರರ ಭವನದ ಆವರಣದಲ್ಲಿ ನಡೆದ ತಾಲ್ಲೂಕು ಮಟ್ಟದ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.

‘ರಾಜ್ಯದಲ್ಲಿ ಅತ್ಯಂತ ಹೆಚ್ಚಿನ ಸದಸ್ಯರನ್ನು ಹೊಂದಿರುವ ಸಂಘಕ್ಕೆ ಮಾನ್ಯತೆ ನೀಡುವಂತೆ ಕೋರಿ ಸಂಘದಿಂದ ಇಲಾಖೆಯ ಆಯುಕ್ತರು, ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಶಿಕ್ಷಣ ಇಲಾಖೆ ಬೃಹದಾಕಾರವಾಗಿ ಬೆಳೆದಿದೆ. ಹಾಲಿ ಇರುವ ಶಿಕ್ಷಕರ ಸಂಘವು ಗ್ರಾಮೀಣ ಭಾಗಗಳಲ್ಲಿ ಕೆಲಸ ಮಾಡುವ ಶಿಕ್ಷಕರು ಸಮಸ್ಯೆಗಳನ್ನು ನಿವಾರಿಸುವಲ್ಲಿ ವಿಫಲವಾಗಿದೆ. ಗ್ರಾಮೀಣ ಭಾಗಗಳಲ್ಲಿ ಕೆಲಸ ಮಾಡುವ ಶಿಕ್ಷಕರು ನೆಮ್ಮದಿಯಿಂದ ಕೆಲಸ ನಿರ್ವಹಿಸಬೇಕು. ನಗರ ಪ್ರದೇಶಗಳಲ್ಲಿ ಸಿಗುವ ಎಲ್ಲ ಸೌಲಭ್ಯಗಳು ಗ್ರಾಮೀಣ ಶಿಕ್ಷಕರಿಗೂ ಸಿಗಬೇಕು’ ಎಂದರು.

ಗ್ರಾಮೀಣ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾರೆಡ್ಡಿ ಮಾತನಾಡಿ, ‘2018ರಲ್ಲಿ ಗ್ರಾಮೀಣ ಸಂಘ ಸ್ಥಾಪನೆಯಾಗಿ ಉತ್ತಮ ರೀತಿ ಬೆಳೆಯುತ್ತಿದೆ. ವಿದ್ಯಾಗಮ ಯೋಜನೆಯನ್ನು ಸರ್ಕಾರ ರೂಪಿಸಿದಾಗ ಇತರೆ ಸಂಘಗಳು ಅದನ್ನು ರದ್ದುಗೊಳಿಸಲು ಪ್ರಯತ್ನಿಸಿದರು. ಮುಖ್ಯ ಶಿಕ್ಷಕರಿಗೆ ವಿಶೇಷ ಪ್ರತ್ಯೇಕ ವೇತನ ಬಡ್ತಿ, ಗ್ರಾಮೀಣ ಭತ್ಯೆ, ಶಾಲಾ ಅನುದಾನ, ಮಕ್ಕಳ ಸಲಕರಣೆಗಳು, ಹಿರಿಯರಿಗೆ ಕ್ರೀಡೆ, ರಾಜ್ಯದಲ್ಲಿ ಪ್ರತಿಭಾ ಪುರಸ್ಕಾರ ಮತ್ತಿತರ ಬೇಡಿಕೆಗಳ ಈಡೇರಿಕೆಗಾಗಿ ಸಂಘ ಶ್ರಮಿಸುತ್ತಿದೆ’ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಆಯ್ಕೆಯಾದ ಎನ್.ದಾಮೋದರ್ರೆಡ್ಡಿ, ಕೆ.ಸಿ.ಶಿವಶಂಕರರೆಡ್ಡಿ ಮತ್ತು ಎನ್.ಶುಭ ಹಾಗೂ ಕೆಲವು ಶಿಕ್ಷಕರಿಗೆ ಸನ್ಮಾನಿಸಲಾಯಿತು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಜನಾರ್ಧನರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಗೃಹನಿರ್ಮಾಣ ಮಂಡಳಿಯ ಸದಸ್ಯ ವೆಂಕಟಾಚಲಪತಿ ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಶ್ವತ್ಥನಾರಾಯಣರೆಡ್ಡಿ, ಎನ್.ಸಿ.ಈಶ್ವರ್ರೆಡ್ಡಿ, ಜಿ.ರಾಮರೆಡ್ಡಿ, ಆರ್.ನಾರಾಯಣಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT